ಸುಮಲತಾಗೆ ಕಮಲ - ಕೈ ಬಲ : ರೆಬೆಲ್ ನಾಯಕಿ ಬೆನ್ನಿಗೆ ಉಭಯ ಪಕ್ಷ ನಾಯಕರು

Published : Mar 29, 2019, 11:48 AM IST
ಸುಮಲತಾಗೆ ಕಮಲ - ಕೈ ಬಲ : ರೆಬೆಲ್ ನಾಯಕಿ ಬೆನ್ನಿಗೆ ಉಭಯ ಪಕ್ಷ ನಾಯಕರು

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಅಭ್ಯರ್ಥಿಗಳ ಪ್ರಚಾಋ ಕಾರ್ಯವೂ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಇತ್ತ ಮಂಡ್ಯದಲ್ಲಿ ಸುಮಲತಾ ಬೆನ್ನಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರೂ ಸೇರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. 

ಮಂಡ್ಯ :  ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಸುಮಲತಾ ಪರವಾಗಿ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ನಡೆಸುತ್ತಿದ್ದಾರೆ. 

ಮಂಡ್ಯ ಜಿಲ್ಲೆಯಾದ್ಯಂತ ಕಾಂಗ್ರೆಸ್ ಮುಖಂಡ ರವೀಂದ್ರ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದ್ದು, ಒಟ್ಟು 12 ದಿನಗಳ ಕಾಲ ನಡೆಯಲಿದೆ. ಮೇಲುಕೋಟೆಯಿಂದ  ಪಾದಯಾತ್ರೆ ಪ್ರಾರಂಭಿಸಿದ್ದು, ವಿವಿಧ ತಾಲೂಕುಗಳಿಗೆ ಸಂಚರಿಸಲಿದೆ.  

ಪಕ್ಷೇತರ ಅಭ್ಯರ್ಥಿಯಾದ ಸುಮಲತಾ ಪರವಾಗಿ  ಅಬ್ಬರ ಪ್ರಚಾರ ನಡೆಯುತ್ತಿದ್ದು, ಮದ್ದೂರು ತಾಲೂಕಿನ ಕೊಪ್ಪ ಭಾಗದಲ್ಲಿ ಸುಮಲತಾ ರೋಡ್ ಶೋ ನಡೆಸುತ್ತಿದ್ದಾರೆ. ಸುಮಲತಾ ಪ್ರಚಾರಕ್ಕೆ ಪುತ್ರ ಅಭಿಷೇಕ್, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು, ಅಂಬರೀಶ್ ಅಭಿಮಾನಿಗಳು ಸಾಥ್ ನೀಡಿದ್ದಾರೆ. 

ಇತ್ತ ಮಂಡ್ಯದ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರಚಾರಕ್ಕೆ ಇಳಿದಿದ್ದು,  ಸಚಿವ ಸಾ.ರಾ.ಮಹೇಶ್ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!