ಪಕ್ಷದಿಂದ ಹೊರ ಹಾಕುವ ಎಚ್ಚರಿಕೆ ನೀಡಿದ ಎಚ್‌ಡಿಡಿ

Published : Mar 29, 2019, 08:21 AM IST
ಪಕ್ಷದಿಂದ ಹೊರ ಹಾಕುವ ಎಚ್ಚರಿಕೆ ನೀಡಿದ ಎಚ್‌ಡಿಡಿ

ಸಾರಾಂಶ

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ವೇಳೆ ಜೆಡಿಎಸ್ ಮುಖಂಡ ಎಚ್.ಡಿ ದೇವೇಗೌಡ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು :  ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿವೆ.

ಈ ವೇಳೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ವಿರುದ್ಧ ಯಾವುದೇ ಕಾರ್ಯಕರ್ತರು ಅಥವಾ ಮುಖಂಡರು ಮಾತನಾಡಿದರೂ ಪಕ್ಷದಿಂದ ಹೊರ ಹಾಕುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. 

ಮೈತ್ರಿ ಅಭ್ಯರ್ಥಿಯ ವಿರುದ್ಧ ಯಾರೂ ಮಾತನಾಡಬಾರದು. ಎರಡೂ ಪಕ್ಷದವರು ಕುಳಿತು ಬೂತ್‌ಮಟ್ಟದಲ್ಲಿ ಕೆಲಸ ಮಾಡಬೇಕು. ರಾಷ್ಟ್ರದ ಭವಿಷ್ಯ ರೂಪಿಸಲು 21 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಯಾರು ಏನೇ ಹೇಳಿದರೂ ನಾವು ಕುಗ್ಗಬಾರದು. ಎಲ್ಲಾ ವೈಮನಸ್ಯ ಬದಿಗಿರಿಸಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!