ಪ್ರಕಾಶ್‌ ರಾಜ್‌ ಸೇರಿದಂತೆ ನಾಲ್ವರಿಗೆ ನೋಟಿಸ್‌

By Web DeskFirst Published Apr 17, 2019, 9:31 AM IST
Highlights

ಲೋಕಸಭಾ ಚುನಾವಣೆಗೆ ಒಂದು ದಿನವಷ್ಟೇ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದವರಿಗೆ ನೋಟಿಸ್ ನೀಡಲು ಆಯೋಗ ಸಜ್ಜಾಗಿದೆ. 

ಬೆಂಗಳೂರು :  ಕ್ರಿಮಿನಲ್‌ ಹಿನ್ನೆಲೆ ಉಳ್ಳ ಅಭ್ಯರ್ಥಿಗಳು ದಿನಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಿಗೆ ಮೂರು ಬಾರಿ ಜಾಹೀರಾತು ನೀಡಬೇಕು ಎಂದು ನಿಯಮವಿದೆ. 

ಅದರಂತೆ ನಗರದಲ್ಲಿಯ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಒಟ್ಟು ಅಭ್ಯರ್ಥಿಗಳ ಪೈಕಿ ನಾಲ್ವರು ಅಭ್ಯರ್ಥಿಗಳು ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ. ಅದರಲ್ಲಿ ಕೇಂದ್ರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಪ್ರಕಾಶ್‌ ರಾಜ್‌ ಎರಡು ಬಾರಿ ಜಾಹೀರಾತು ನೀಡಿದ್ದಾರೆ.

 ಇನ್ನುಳಿದಂತೆ ಉತ್ತರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಗಳಾದ ಜಗದೀಶ್‌ ಕುಮಾರ್‌, ಹನುಮೇಗೌಡ ಹಾಗೂ ದಕ್ಷಿಣ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೊಲ್ಲೂರು ಮಂಜುನಾಥ ನಾಯ್ಕ್ ಜಾಹೀರಾತು ನೀಡಿಲ್ಲ. 

ಹಾಗಾಗಿ ನಾಲ್ಕೂ ಅಭ್ಯರ್ಥಿಗಳ ವಿರುದ್ಧ ಆಯೋಗಕ್ಕೆ ದೂರು ನೀಡಲಾಗುವುದು. ಅಭ್ಯರ್ಥಿಗಳಿಗೆ ನೋಟಿಸ್‌ ಜಾರಿ ಮಾಡಲಾಗುವುದು ಎಂದು ಮಂಜುನಾಥ್‌ ಪ್ರಸಾದ್‌ ತಿಳಿಸಿದರು.

ದೇಶದಲ್ಲಿ ಏ.11ರಿಂದ ಮೇ.19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

click me!