ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ವೇಳೆ ವಿವಿಧ ಪಕ್ಷಗಳಲ್ಲಿ ಜಿದ್ದಾ ಜಿದ್ದಿ ಜೋರಾಗಿದ್ದು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವು ಖಚಿತ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಹೇಳಿದ್ದಾರೆ.
ಬಾಗಲಕೋಟೆ : ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುಮಲತಾ ಅಂಬರೀಶ್ ಗೆದ್ದೇ ಗೆಲ್ಲುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಚುನಾವಣೆ ಮುಗಿಯುವವರೆಗೂ ಮಂಡ್ಯ ಹಾಸನ ಮುಖ್ಯಮಂತ್ರಿಯಾಗಿರುತ್ತಾರೆ. ಸುಮಲತಾ ಗೆಲುವು ನಿಶ್ಚಿತ ಎಂದು ಅವರಿಗೆ ಗೊತ್ತಾಗಿದ್ದು, ಇದರಿಂದ ಆತಂಕಗೊಂಡಿದ್ದಾರೆ ಎಂದರು.
ಜೆಡಿಎಸ್ ಮಂಡ್ಯದಲ್ಲಿ ಮೂವರು ಸುಮಲತಾ ಎನ್ನುವವರನ್ನು ಕಣಕ್ಕೆ ಇಳಿಸಿದ್ದು, ಇದರಿಂದ ಜನರು ಗೊಂದಲಗೊಳ್ಳುವುದಿಲ್ಲ. ಜನರು ಪಕ್ಷದ ಚಿಹ್ನೆ ನೋಡಿ ಮತದಾನ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪೂರ್ಣ ಸ್ವಾತಂತ್ರ್ಯವಿದ್ದು, ಯಾರ ಪರವಾಗಿ ಯಾರಬೇಕಾದರೂ ಓಟು ಕೇಳಬಹುದು.
ಇನ್ನು ಸುಮಲತಾ, ದರ್ಶನ್ ,ಯಶ್ ಸೇರಿ ಸುಮಲತಾ ಪರ ಓಡಾಡುವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಈಗಾಗಲೇ ಅವರ ಪರವಾಗಿರುವ ನಟರಿಗೆ ಹಲವು ರೀತಿಯ ಆತಂಖ ಎದುರಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ರಕ್ಷಣೆ ಒದಗಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದಾರೆ.
ಸುಮಲತಾ ಪರ ಇರುವವರಿಗೆ ರಕ್ಷಣೆ ಒದಗಿಸದೇ ಇದ್ದಲ್ಲಿ ರಾಜ್ಯ ಸರ್ಕಾರ ಗೂಂಡಾಗಿರಿ ನಡೆಸುತ್ತಿದೆ ಎಂದು ನಾನು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದರು. ಇನ್ನು ದರ್ಶನ್ ಮನೆಗೆ ಕಲ್ಲು ತೂರಿದ್ದು, ಕಲ್ಲು ತೂರಾಟ ನಡೆಸಿದ್ದು ಯಾರೆಂದೂ ಇನ್ನೂ ಗೊತ್ತಾಗಿಲ್ಲ ಎಂದು ಈಶ್ವರಪ್ಪ ಹೇಳಿದರು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...