ಟೈಮ್ಸ್ ನೌ ಲೋಕಸಭಾ ಚುನಾವಣಾ ಸಮೀಕ್ಷೆ: ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ..?

Published : Mar 18, 2019, 08:15 PM ISTUpdated : Mar 18, 2019, 08:39 PM IST
ಟೈಮ್ಸ್ ನೌ ಲೋಕಸಭಾ ಚುನಾವಣಾ ಸಮೀಕ್ಷೆ: ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ..?

ಸಾರಾಂಶ

ಟೈಮ್ಸ್ ನೌ ಲೋಕಸಭಾ ಚುನಾವಣಾ ಸಮೀಕ್ಷೆ ಬಹಿರಂಗ! ಕರ್ನಾಟಕದ 28 ಲೋಕಸಭಾ ಚುನಾವಣಾ ಸಮೀಕ್ಷೆ  | ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ..?

ಬೆಂಗಳೂರು, [ಮಾ.18]: 17ನೇ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಈ ಬಾರಿ ಯಾರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎನ್ನುವ ಲೆಕ್ಕಾಚಾರಗಳು ಜೋರಾಗಿ ನಡೆದಿವೆ. ಅದರಲ್ಲೂ  ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ 17 ಸೀಟು ಗೆದ್ದು ಮೇಲುಗೈ ಸಾಧಿಸಿದ್ದರೆ, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳನ್ನು ಗೆದ್ದಿದ್ದವು. ಆದ್ರೆ ಈ ಭಾರಿ ಫಲಿತಾಂಶ ಏನಾಗಲಿದೆ ಎನ್ನುವ ಚಿತ್ರಣ ಮೇ 23ರಂದು ತಿಳಿಯಲಿದೆ.

2019ರ ಲೋಕಸಭಾ ಚುನಾವಣಾ ಸಮೀಕ್ಷೆ: ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸೀಟು?

 ಈ ಬಾರಿಯೂ ಇದೇ ಫಲಿತಾಂಶ ಮರುಕಳಿಸಲಿದೆಯಾ? ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದಾಗಿ ರಿಸಲ್ಟ್ ನಲ್ಲಿ ವ್ಯತ್ಯಾಸವಾಗಲಿದೆಯಾ? ಎನ್ನುವ ಪ್ರಶ್ನೆಗಳು ಸಹಜವಾಗಿ ಕಾಡುತ್ತವೆ.

ಹೌದು...ಬಿಜೆಪಿಗೆ ಕಳೆದ ಲೋಕಸಭೆಯಲ್ಲಿ ಸಿಕ್ಕ ಸ್ಥಾನಗಳಿಗಿಂತ ಈ ಬಾರಿ ಮೂರು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ.

ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಗೆ 14 ಸ್ಥಾನಗಳು ಒಲಿಯಲಿವೆ ಎಂದು ಸಮೀಕ್ಷೆ ಹೇಳಿದೆ. ಅಂದ್ರೆ ಬಿಜೆಪಿ 14ಸ್ಥಾನಗಳಲ್ಲಿ ಗೆದ್ದರೆ,  ದೋಸ್ತಿಗಳಿಗೆ  13 + 1 = 14 ಸ್ಥಾನಗಳು ಸಿಗಲಿವೆ ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ.

ಸಮೀಕ್ಷೆಗಳ ಪ್ರಕಾರ ಕರ್ನಾಟಕದಲ್ಲಿ ಮೈತ್ರಿಕೂಟ ಶೇ 43.50ರಷ್ಟು ಮತಗಳನ್ನು ಪಡೆಯಲಿದೆ. ಬಿಜೆಪಿ 44.30 ರಷ್ಟುಮತ ಹಾಗೂ ಇತರರು 11.20 ರಷ್ಟು ಮತಗಳನ್ನು ಪಡೆಯಲಿದ್ದಾರೆ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!