ಸೋಲಿನ ಹೊಣೆಹೊತ್ತು JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ..?

Published : May 23, 2019, 01:45 PM ISTUpdated : May 23, 2019, 01:46 PM IST
ಸೋಲಿನ ಹೊಣೆಹೊತ್ತು JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ..?

ಸಾರಾಂಶ

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವರದಿಯಾಗುತ್ತಿದ್ದಂತೆಯೇ ಇತ್ತ  ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಬೆಂಗಳೂರು, (ಮೇ.23): ಕರ್ನಾಟದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಲೆಕ್ಕಾಚಾರಗಳೆಲ್ಲ ಉಲ್ಟಾಪಲ್ಟಾವಾಗಿವೆ.  ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮೈತ್ರಿಗೆ ಬಾರೀ ಹಿನ್ನೆಡೆಯಾಗಿದೆ.

ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆಹೊತ್ತು ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವರದಿಯಾಗುತ್ತಿದ್ದಂತೆಯೇ ಇತ್ತ  ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಕುಮಾರಸ್ವಾಮಿ ರಾಜೀನಾಮೆ ಸಾಧ್ಯತೆ: ಸಂಜೆಗೆ ಕುರ್ಚಿ ಬಿಡಲಿದ್ದಾರಾ ಹೆಚ್‌ಡಿಕೆ?

ರಾಜ್ಯದಲ್ಲಿ ಬಿಜೆಪಿ ಸ್ಪರ್ಧಿಸಿದ್ದ ಒಟ್ಟು 27 ಸ್ಥಾನಗಳಲ್ಲಿ ಈಗಾಗಲೇ 24 ಸ್ಥಾನಗಳಲ್ಲಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಪ್ರಮುಖ ಅಂಶ ಅಂದ್ರೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಾಸನವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಗೆ ಬಿಟ್ಟುಕೊಟ್ಟ ತುಮಕೂರಿನಿಂದ ಅಖಾಡಕ್ಕಿಳಿದಿದ್ದರು. ಆದ್ರ ತುಮಕೂರಿನ ಜನ ದೇವೇಗೌಡ ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!