ಲೋಕಸಭಾ ಚುನಾವಣೆ ಬೆನ್ನಲ್ಲೇ ಕೈಗೆ ಮತ್ತೊಂದು ಬೆಂಬಲ

Published : Mar 14, 2019, 03:02 PM IST
ಲೋಕಸಭಾ ಚುನಾವಣೆ ಬೆನ್ನಲ್ಲೇ ಕೈಗೆ ಮತ್ತೊಂದು ಬೆಂಬಲ

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಬೆಂಬಲ ದೊರಕಿದೆ. 

ಮುಂಬೈ :  ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಪಕ್ಷಗಳು ಚುನಾವಣಾ ಗೆಲುವಿಗಾಗಿ ಸಕಲ ಸಿದ್ಧತೆ ನಡೆಸುತ್ತಿವೆ. ಅಭ್ಯರ್ಥಿಗಳ ಆಯ್ಕೆಯ ಕುತೂಹಲವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 

ಇತ್ತ ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರ ಗದ್ದುಗೆಗೆ ಏರಲು ಸಿದ್ಧವಾಗುತ್ತಿದ್ದರೆ, ಕಾಂಗ್ರೆಸ್ ಕೂಡ ಕೇಂದ್ರದಲ್ಲಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದೆ. 

 ಮಹಾಘಟಬಂದನ್ ರಚಿಸಿಕೊಂಡು ಅಧಿಕಾರ ಪಡೆಯಲು ವಿಪಕ್ಷಗಳಲ್ಲಿ ಸಾಕಷ್ಟು ಪ್ರಮಾಣದ ತಯಾರಿ ನಡೆಯುತ್ತಿದೆ. 

ಇದೀಗ ವಿಪಕ್ಷ ಒಕ್ಕೂಟಕ್ಕೆ ಲೋಕಸಭಾ ಚುನಾವಣೆ ಬೆನ್ನಲ್ಲೇ  ಮತ್ತೊಂದು ಪಕ್ಷ ಸೇರ್ಪಡೆಯಾಗಿದ್ದು, ಮತ್ತಷ್ಟು ಬಲ ಬಂದಂತಾಗಿದೆ. 

ಮಹಾರಾಷ್ಟ್ರದ ಸ್ವಾಭಿಮಾನಿ ಪಕ್ಷವು ಇದೀಗ ವಿಪಕ್ಷ ಒಕ್ಕೂಟಕ್ಕೆ ಕೈ ಜೋಡಿಸಿದೆ.  ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. 

ಈ ಮೈತ್ರಿ ಗೆಲುವಿನ ಮೇಲೆ ಪರಿಣಾಮ ಉಂಟು ಮಾಡಲಿದೆ ಎನ್ನುವ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!