ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ದೂರು ದಾಖಲು

Published : Apr 02, 2019, 09:08 PM IST
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ದೂರು ದಾಖಲು

ಸಾರಾಂಶ

ಮಂಡ್ಯ ಲೋಕಸಭಾ ಅಖಾಡಕ್ಕೆ ಸ್ಟಾರ್ ನಟರಾದ ದರ್ಶನ್ ಹಾಗೂ ಯಶ್ ಇಳಿದಿದ್ದು, ಚುನಾವಣಾ  ರಂಗು ಪಡೆದಿದೆ. ಈ ಮಧ್ಯೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಫೈಟ್ ನೀಡುತ್ತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ದೂರು ದಾಖಲಾಗಿದೆ.

ಮಂಡ್ಯ, [ಏ.02]: ಮಂಡ್ಯ ಲೋಕಸಭೆ ಚುನಾವಣಾ ಕಣದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಶತಾಯಗತಾಯ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಅವರನ್ನ ಸೋಲಿಸೋಕೆ ಸುಮಲತಾ ಅಂಬರೀಶ್ ಅದ್ಧೂರಿ ಪ್ರಚಾರ ನಡೆಸುತ್ತಿದ್ದು, ಉತ್ತಮ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ.

ಆರೋಪಗಳ ಸುರಿಮಳೆ, ಮಂಡ್ಯ ಡಿಸಿ ಮಂಜುಶ್ರೀ ಟ್ರಾನ್ಸ್‌ಫರ್ ಆಗ್ತಾರಾ..?

ಮತ್ತೊಂದೆಡೆ ಸುಮಲತಾ ಅಂಬರೀಶ್ ಜನರ ಪ್ರೀತಿ ಕಂಡು ಫುಲ್ ಖುಷಿಯಲ್ಲಿದ್ದಾರೆ.ಆದ್ರೆ ಈ ಮಧ್ಯೆ ಪಕ್ಷೇತ್ರ ಅಭ್ಯರ್ಥಿ ಸುಮಲತಾ ವಿರುದ್ಧ ದೂರು ದಾಖಲಾಗಿದೆ.ಪ್ರಚಾರದ ವೇಳೆ ಕಾಂಗ್ರೆಸ್ ಬಾವುಟ ಬಳಸಿದ್ದಾರೆ ಎಂದು ಆರೋಪಿಸಿ ಸುಮಲತಾ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಸುಮಲತಾ ಅವರು ಪ್ರಚಾರದ ವೇಳೆ ಕಾಂಗ್ರೆಸ್ ಬಾವುಟ ಬಳಸಿರುವುದು ಕಾನೂನು ಬಾಹಿರವಾಗಿದ್ದು, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾದ ಹಿನ್ನಲೆಯಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!