ಚುನಾವಣಾ ಬೆನ್ನಲ್ಲೇ ಆಘಾತ : ಕಾಂಗ್ರೆಸ್ ತೊರೆದು ಬಿಜೆಪಿ ಕೈ ಹಿಡಿದ ಶಾಸಕ

Published : Mar 17, 2019, 03:50 PM IST
ಚುನಾವಣಾ ಬೆನ್ನಲ್ಲೇ  ಆಘಾತ :  ಕಾಂಗ್ರೆಸ್ ತೊರೆದು ಬಿಜೆಪಿ ಕೈ ಹಿಡಿದ ಶಾಸಕ

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಗೆ ಆಘಾತ ಎದುರಾಗಿದೆ. ಹಾಲಿ ಶಾಸಕರೋರ್ವರು ರಾಜೀನಾಮೆ ನೀಡಿ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ. 

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದೆ. 

ಒಡಿಶಾದಲ್ಲಿ ವಿಧಾನಸಭಾ ಚುನಾವಣೆಯೂ ಸಮೀಪಿಸಿದ್ದು, ಇದೇ ವೇಳೆ ಇಲ್ಲಿನ ಕಾಂಗ್ರೆಸ್ ಶಾಸಕ ಪ್ರಕಾಶ್ ಚಂದ್ರ ಬೆಹೆರಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಅಲ್ಲದೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ಕೂಡ ರಾಜೀನಾಮೆ ಸಲ್ಲಿಸಿದ್ದು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್  ಸಮ್ಮುಖದಲ್ಲಿ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರಿದ್ದಾರೆ. 

ನರೇಂದ್ರ ಮೋದಿ ನಾಯಕತ್ವದ ಮೇಲೆ ನಂಬಿಕೆ ಇದ್ದು, ತಮ್ಮ ಕ್ಷೇತ್ರದಲ್ಲಿ ಯುವಜನತೆ ಸರ್ಜಿಕಲ್ ದಾಳಿಯಂತಹ ನಿರ್ಧಾರಗಳಿಂದ ಸ್ಫೂರ್ತಿಯಾಗಿದ್ದಾರೆ. ಈ ನಿಟ್ಟಿನಲ್ಲಿ  ತಾವು ಬಿಜೆಪಿ ಸೇರ್ಪಡೆಯಾಗಿದ್ದಾಗಿ ಹೇಳಿದರು. 

ಇನ್ನು ಇದೇ ವೇಳೆ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್ ಬೆಹೆರಾ ಅವರ ಹಾಜರಿಯಲ್ಲಿ ಪ್ರಧಾನಿ ನಾಯಕತ್ವದಲ್ಲಿ ಒಡಿಶಾ ಬದಲಾಯಿಸಬಹುದು ಎಂದು ಹೇಳಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!