
ಕಾರವಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಚುನಾವಣಾ ಕಾವೂ ಕೂಡ ಎಲ್ಲೆಡೆ ಜೋರಾಗಿದೆ. ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಪ್ರಚಾರವೂ ಬಿರುಸಿನಿಂದ ನಡೆಯುತ್ತಿದೆ.
ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಯುವಕನೋರ್ವ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಅವಮಾನಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಘಟನೆಯೊಂದು ವರದಿಯಾಗಿದೆ.
ಒಳ ಉಡುಪಿನ ಮೇಲೆ ಪ್ರಧಾನಿ ಮೋದಿ ಹಾಗೂ ಕರಂದ್ಲಾಜೆ ಚಿತ್ರ ಹಾಕಿ ಅವಮಾನಿಸಿ ಯುವಕನೋರ್ವ ಪೋಸ್ಟ್ ಮಾಡಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಶೇಖರ ನಾಯ್ಕ ಎನ್ನುವನಿಂದ ಈ ಕೃತ್ಯ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಅಲ್ಲದೇ ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.