
ವಾರಾಣಸಿ(ಏ.26): ನಿನ್ನೆಯಷ್ಟೇ(ಏ.25) ಸ್ವಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ವಾರಾಣಸಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಧಾನಿ, ಲೋಕಸಭೆ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಮೋದಿ ಅವರನ್ನು ಬೆಂಬಲಿಸಿ ಎನ್‌ಡಿಎ ನಾಯಕರ ದಂಡೇ ನೆರೆದಿದ್ದು ವಿಶೇಷ.
ಮೋದಿ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದ ಪ್ರಮುಖರು:
ಬಿಹಾರ ಸಿಎಂ ನಿತೀಶ್ ಕುಮಾರ್
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ
ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್
ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್
ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ
ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ
ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಡ್ನವೀಸ್
ಅಸ್ಸಾಂ ಸಿಎಂ ಸೊರ್ಬಾನಂದ್ ಸೋನೊವಾಲ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
ಕೇಂದ್ರ ಸಚಿವ ನಿತಿನ್ ಗಡ್ಕರಿ
ಕೇಂದ್ರ ಸಚಿವ ಪಿಯೂಷ್ ಗೋಯಲ್
ಬಿಜೆಪಿ ಸಂಸದೆ ಹೇಮಾ ಮಾಲಿನಿ
ಬಿಜೆಪಿ ನಾಯಕಿ ಹೇಮಾ ಮಾಲಿನಿ
ಮೋದಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದವರು:
ಡಾ. ಅನ್ನಪೂರ್ಣ ಶುಕ್ಲಾ
ಡಾ. ಜಗದೀಶ್ ಗುಪ್ತಾ
ಡೋಮರಾಜ್ ಜಗದೀಶ್
ಇದಕ್ಕೂ ವಾರಾಣಸಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಿನ್ನೆಯ ರೋಡ್ ಶೋನಲ್ಲಿ ನಿಮ್ಮ ಶ್ರಮವನ್ನು ಕಂಡಿದ್ದು, ಇಡೀ ವಾರಾಣಸಿ ನಗರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದೇ ಮೊದಲ ಬಾರಿಗೆ ದೇಶದಲ್ಲಿ ಬಿಜೆಪಿ ಪರ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಅಲೆ ಎದ್ದಿದ್ದು, ದೇಶ ನಿರ್ಮಾಣ ಕಾರ್ಯದಲ್ಲಿ ಅವಿರತವಾಗಿ ಶ್ರಮಿಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದರು.
ಪಕ್ಷ ಅಥವಾ ನನ್ನ ಪರ ಯಾರೇ ಏನೇ ಅವಮಾನ ಮಾಡಿದರೂ ಅದನ್ನು ನೇರವಾಗಿ ನನಗೆ ತಿಳಿಸಿ, ಕೆಸರಲ್ಲಿ ಕಮಲ ಅರಳಿಸುವುದು ಹೇಗೆಂದು ನನಗೆ ಗೊತ್ತಿದೆ ಎಂದು ಪ್ರಧಾನಿ ಮೋದಿ ಈ ವೇಳೆ ಕಾರ್ಯಕರ್ತರನ್ನು ಹುರಿದುಂಬಿಸಿದರು.
ಬಳಿಕ ಕಾಳಭೈರವೇಶ್ವರ್ ದೇವಸ್ಥಾನಕ್ಕೆ ತೆರಳಿದ ಪ್ರಧಾನಿ ಮೋದಿ, ಅಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.