ಗಾಂಭೀರ್ಯತೆ, ಹಾಸ್ಯ, ಭವಿಷ್ಯ: ಮೋದಿ ಮೊದಲ ಸುದ್ದಿಗೋಷ್ಠಿ ವಿಷ್ಯ!

Published : May 17, 2019, 05:32 PM ISTUpdated : May 17, 2019, 05:41 PM IST
ಗಾಂಭೀರ್ಯತೆ, ಹಾಸ್ಯ, ಭವಿಷ್ಯ: ಮೋದಿ ಮೊದಲ ಸುದ್ದಿಗೋಷ್ಠಿ ವಿಷ್ಯ!

ಸಾರಾಂಶ

ನವದೆಹಲಿಯಲ್ಲಿ ಬಿಜೆಪಿ ಸುದ್ದಿಗೋಷ್ಠಿ| 'ಈ ಬಾರಿಯೂ NDA ನೇತೃತ್ವದ ಸರ್ಕಾರ ರಚನೆ ಪಕ್ಕಾ'| ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿಶ್ವಾಸ| 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ| ಪೂರ್ಣ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಎಂದ ಅಮಿತ್ ಶಾ| ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರುವುದು ಖಚಿತ ಎಂದ ಪ್ರಧಾನಿ| ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ| ನನ್ನ 5 ವರ್ಷಗಳ ಆಡಳಿತಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದ ಮೋದಿ| 

ನವದೆಹಲಿ(ಮೇ.17): ಪ್ರಧಾನಿ ಹುದ್ದೆಗೇರಿದ ಬಳಿಕ ಇದೇ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಭಾರೀ ಬಹುಮತದೊಂದಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯುದ್ದಕ್ಕೂ ಹಾಸ್ಯ, ನಗು ಮತ್ತು ಗಾಂಭೀರ್ಯತೆಯಿಂದ ಮಾತನಾಡಿದ ಪ್ರಧಾನಿ ಮೋದಿ, ಚುನಾವಣೆ ಸಂದರ್ಭದಲ್ಲಿ ಪತ್ರಕರ್ತರು ಮತ್ತು ಸುದ್ದಿ ಸಂಸ್ಥೆಗಳು ನಿರ್ವಹಿಸಿದ ಕಾರ್ಯವನ್ನು ತುಂಬು ಹೃದಯದಿಂದ ಶ್ಲಾಘಿಸಿದರು.

ಕಳೆದ ಐದು ವರ್ಷಗಳಲ್ಲಿ ತಮಗೆ ದೇಶದ ಸಂಪೂರ್ಣ ಸಹಕಾರ ದೊರೆತಿದ್ದು, ದೇಶಸೇವೆ ಮಾಡಲು ಅವಕಾಶ ದೊರೆತಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದರು. ಇದೇ ವೇಳೆ ದೇಶ ಮುನ್ನಡೆಸುವಲ್ಲಿ ಮಾಧ್ಯಮಗಳೂ ಕೂಡ ತಮಗೆ ಸಹಕಾರ ನೀಡಿದ್ದು, ಇದಕ್ಕಾಗಿ ನಾನು ಮಾಧ್ಯಮ ಲೋಕಕ್ಕೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಮೋದಿ ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಲೋಕಸಭೆ ಚುನಾವಣೆಗಾಗಿ ಪಕ್ಷದ ತಯಾರಿ, ಯಶಸ್ವಿ ಜನಸಭೆಗಳು ಮತ್ತು ದೇಶದ ಜನರನ್ನು ತಲುಪುವಲ್ಲಿ ಮಾಡಿದ ಪ್ರಯತ್ನಗಳ ಕುರಿತು ಮಾಹಿತಿ ನೀಡಿದರು.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!