
ವಾರಾಣಸಿ(ಏ.22): ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನಾ ದಿನ(ಏ.25) ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದು, ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ವಾರಾಣಸಿಯ ಬನರಾಸ್ ಹಿಂದೂ ವಿಶ್ವವಿದ್ಯಾಲಯದ ಲಂಕಾ ಗೇಟ್ ಸಮೀಪದಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಲಿದೆ.