
ವಾರಾಣಸಿ(ಏ.26): ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮಾತ್ರಕ್ಕೆ ಗೆಲುವು ಸಾಧ್ಯವಿಲ್ಲ. ಮತದಾನದ ದಿನ ಹೋಗಿ ಮತದಾನ ಮಾಡಿದರೆ ಮಾತ್ರ ಗೆಲುವು ಸಾಧ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಪಪತ್ರ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಕೇವಲ ಚುನಾವಣಾ ಭಾಷಣ, ಪ್ರಚಾರಗಳಿಂದ ಯಾವುದೇ ಅಭ್ಯರ್ಥಿ ಗೆಲುವು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಮೋದಿ ಗೆಲ್ಲುತ್ತಾರೆ ಎಂಬ ಅಸಡ್ಡೆ ಭಾವನೆ ಬೇಡ ಎಂದ ಪ್ರಧಾನಿ, ಮತದಾನ ದಿನದಂದು ತಪ್ಪದೇ ಮತ ಹಾಕಿದಾಗ ಮಾತ್ರ ನಿಮ್ಮ ಅಭ್ಯರ್ಥಿ ಗೆಲ್ಲಲು ಸಾಧ್ಯ ಎಂದು ನುಡಿದರು.
ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಬಲಪಡಿಸಿ ಎಂದು ಮತದಾರರಿಗೆ ಕರೆ ನೀಡಿದ ಪ್ರಧಾನಿ, ಯಾರು ಗೆಲ್ಲುತ್ತಾರೆ ಎಂಬುದು ಮುಖ್ಯವಲ್ಲ ಪ್ರಜಾಪ್ರಭುತ್ವ ಗೆಲ್ಲುವುದು ಮುಖ್ಯ ಎಂದು ಮಾರ್ಮಿಕವಾಗಿ ನುಡಿದರು.
ಇನ್ನು ಮುಂಬರುವ ಮೇ 19ರಂದು ವಾರಣಾಸಿಯಲ್ಲಿ ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.