ಮಂಡ್ಯ: ಸುಮಲತಾ-ನಿಖಿಲ್ ಬೆಂಬಲಿಗರ ಮಾರಾಮಾರಿ, ಲಘು ಲಾಠಿ ಪ್ರಹಾರ

Published : Apr 18, 2019, 02:45 PM ISTUpdated : Apr 18, 2019, 03:34 PM IST
ಮಂಡ್ಯ: ಸುಮಲತಾ-ನಿಖಿಲ್ ಬೆಂಬಲಿಗರ ಮಾರಾಮಾರಿ, ಲಘು ಲಾಠಿ ಪ್ರಹಾರ

ಸಾರಾಂಶ

ರಣರಣ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಮಂಡ್ಯ, (ಏ18): ಹೈವೋಲ್ಟೇಜ್ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ  ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. 

"

Live Updates: ತುಮಕೂರಿನಲ್ಲಿ ಕರ್ತವ್ಯ ಮರೆಯದ ಶತಾಯುಷಿಗಳು

ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಇಂದು (ಗುರುವಾರ) ನಿಖಿಲ್ ಕುಮಾರಸ್ವಾಮಿ ವಾಹನ ಏರಿ ರೋಡ್ ಶೋ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸುಮಲತಾ ಅಂಬರೀಶ್  ಸಹ ಪ್ರಚಾರಕ್ಕೆ ಮುಂದಾಗಿದ್ದಾರೆ. ಆದ್ರೆ ಸುಮಲತಾ ಪ್ರಚಾರಕ್ಕೆ ಪೊಲೀಸರು ನಿರಾಕರಿಸಿದ್ದಾರೆ.

ಇದ್ರಿಂದ ಕೆರಳಿದ ಸುಮಲತಾ ಬೆಂಬಲಿಗರು ಪೊಲೀಸರ ವರ್ತನೆಗೆ ಆಕ್ರೋಶಗೊಂಡು ಸುಮಲತಾ ಪರ ಘೋಷಣೆ ಕೂಗಿದ್ರು. ಈ ವೇಳೆ ನಿಖಿಲ್ ಹಾಗೂ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.

ತಕ್ಷಣವೇ ಪೋಲಿಸರು ಮಧ್ಯೆ ಪ್ರವೇಶಿಸಿ ಎರಡು ಕಡೆ ಬೆಂಬಲಿಗರನ್ನು ನಿಯಂತ್ರಿಸಿ, ಪರಿಸ್ಥಿತಿಯನ್ನು ಶಾಂತಗೊಳಿಸಿದರು. 

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!