ಪ್ರಧಾನಿ ವಾಯುದಾಳಿ ಉಲ್ಲೇಖ: ಶೀಘ್ರ ಕ್ರಮದ ಭರವಸೆ ನೀಡಿದ ಆಯೋಗ!

By Web DeskFirst Published Apr 24, 2019, 3:56 PM IST
Highlights

ಚುನಾವಣಾ ಪ್ರಚಾರ ಸಭೆಯಲ್ಲಿ ಬಾಲಾಕೋಟ್ ವಾಯುದಾಳಿ ಉಲ್ಲೇಖ| ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮದ ಭರವಸೆ| ಮೋದಿ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿದ ಚುನಾವಣಾ ಆಯೋಗ| ಸೇನೆಗೆ ಸಂಬಂಧಿಸಿದ ವಿಚಾರಗಳ ಆಧಾರದ ಮೇಲೆ ಮತ ಕೇಳುವಂತಿಲ್ಲ ಎಂದ ಆಯೋಗ|

ನವದೆಹಲಿ(ಏ.24): ಲೋಕಸಭೆ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಬಾಲಾಕೋಟ್ ವಾಯುದಾಳಿ ಉಲ್ಲೇಖಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಚುನಾವಣೆ ಪ್ರಚಾರಗಳಲ್ಲಿ ಸೇನೆಗೆ ಸಂಬಂಧಿಸಿದ ವಿಚಾರಗಳ ಆಧಾರದ ಮೇಲೆ ಮತ ಕೇಳಬಾರದು ಎಂದು ಚುನಾವಣಾ ಆಯೋಗ ಸ್ಪಷ್ಟ ಸೂಚನೆ ನೀಡಿದೆ. ಆದರೂ ಪ್ರಧಾನಿ ಮೋದಿ ಮತ್ತು ಇತರ ನಾಯಕರು ತಮ್ಮ ಪ್ರಚಾರ ಭಾಷಣಗಳಲ್ಲಿ ಬಾಲಾಕೋಟ್ ವಾಯುದಾಳಿ ಕುರಿತು ಉಲ್ಲೇಖಿಸುತ್ತಿದ್ದಾರೆ.

ಆಯೋಗದ ನಿಯಮಗಳನ್ನು ಉಲ್ಲಂಘಿಸಿದವರು ಯಾರೇ ಆದರೂ ಅವರ ವಿರುದ್ಧ  ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಭರವಸೆ ನೀಡಿದೆ. 

2019ರ ಲೋಕಸಭೆ ಚುನಾವಣೆಗೆ ದೇಶದಲ್ಲಿ ಮೂರು ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, ಇನ್ನೂ ನಾಲ್ಕು ಹಂತದ ಮತದಾನ ಪ್ರಕ್ರಿಯೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ಧಾರ ಮಹತ್ವ ಪಡೆದುಕೊಂಡಿದೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು, ಏ.23 ರಂದು ಎರಡನೇ ಹಂತದ ಮತದಾನ ಮುಕ್ತಾಯ ಕಂಡಿದೆ. ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

click me!