ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ದೇಶಭಕ್ತ: ಸಾಧ್ವಿ!

Published : May 16, 2019, 04:11 PM IST
ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ದೇಶಭಕ್ತ: ಸಾಧ್ವಿ!

ಸಾರಾಂಶ

‘ನಾಥೂರಾಮ್ ಗೋಡ್ಸೆ ಓರ್ವ ನಿಜವಾದ ದೇಶಭಕ್ತ’| ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್| ಕಮಲ್ ಹಾಸನ್ ಹೇಳಿಕೆಗೆ ತಿರುಗೇಟು ನೀಡಿದ ಸಾಧ್ವಿ| ‘ಗೋಡ್ಸೆ ಓರ್ವ ದೇಶಭಕ್ತರಾಗಿದ್ದು, ದೇಶಭಕ್ತರಾಗಿಯೇ ಉಳಿಯಲಿದ್ದಾರೆ’|

ನವದೆಹಲಿ(ಮೇ.16): ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಓರ್ವ ದೇಶಭಕ್ತರಾಗಿದ್ದು, ಅವರು ದೇಶಭಕ್ತರಾಗಿಯೇ ಉಳಿಯಲಿದ್ದಾರೆ ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಓರ್ವ ಹಿಂದೂ ಎಂಬ ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿಕೆಗೆ ಪ್ರತಿಯಾಗಿ, ಸಾಧ್ವಿ ಗೋಡ್ಸೆ ಅವರನ್ನು ದೇಶಭಕ್ತ ಎಂದು ಕರೆದಿದ್ದಾರೆ.

ನಾಥೂರಾಮ್ ಕೃತ್ಯವನ್ನು ಯಾರು ಬೇಕಾದರೂ ತಮ್ಮ ಮೂಗಿನ ನೇರಕ್ಕೆ ಅರ್ಥೈಸಿಕೊಳ್ಳಬಹುದು. ಆದರೆ ಅವರೊಬ್ಬ ದೇಶಭಕ್ತರಾಗಿದ್ದು, ಭವಿಷ್ಯದಲ್ಲೂ ಅವರು ದೇಶಭಕ್ತರಾಗಿಯೇ ಉಳಿಯಲಿದ್ದಾರೆ ಎಂದು ಸಾಧ್ವಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!