
ಲಕ್ನೋ(ಏ.13): ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉತ್ತರ ಪ್ರದೇಶದ ಲಕ್ನೋ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ರಾಜನಾಥ್ ಸಿಂಗ್ ಹನುಮಾನ್ ಸೇತು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುಮಾರು 6 ಕಿ.ಮೀ. ಭರ್ಜರಿ ರೋಡ್ ಶೋ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಇನ್ನು ರಾಜನಾಥ್ ಸಿಂಗ್ ವಿರುದ್ಧ ಲಕ್ನೋದಲ್ಲಿ ಪ್ರತಿಪಕ್ಷದ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಇದುವರೆಗೂ ಯಾರೂ ನಾಮಪತ್ರ ಸಲ್ಲಿಸದಿರುವುದು ತೀವ್ರ ಕುತೂಹಲ ಮೂಡಿಸಿದೆ.
67 ವರ್ಷದ ರಾಜನಾಥ್ ಸಿಂಗ್ ಲಕ್ನೋದಿಂದ ಎರಡನೇ ಬಾರಿಗೆ ಕಣಕ್ಕಿಳಿಯುತ್ತಿದ್ದಾರೆ. 2009ರಲ್ಲಿ ಉತ್ತರ ಪ್ರದೇಶದ ಘಾಜಿಯಾಬಾದ್ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದ ರಾಜನಾಥ್ 2014ರಲ್ಲಿ ಕ್ಷೇತ್ರ ಬದಲಾಯಿಸಿ ಲಕ್ನೋ ಲೋಕಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು.