ಬೆಂ. ದಕ್ಷಿಣದಿಂದ ತೇಜಸ್ವಿ ಸೂರ್ಯ ಸ್ಪರ್ಧಿಸಿದರೆ ಕಾಂಗ್ರೆಸ್ ಸ್ಪರ್ಧಿ ಯಾರು?

By Web DeskFirst Published Mar 24, 2019, 8:14 AM IST
Highlights

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್ ಗೆ ಇಲ್ಲ ಟಿಕೆಟ್| ಕಮಲ ಪಾಳಯದಿಂದ ತೇಜಸ್ವಿ ಸೂರ್ಯ ಕಣಕ್ಕಿಳಿಯುವ ಸಾಧ್ಯತೆ| ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಸ್ಪರ್ಧಿ ಯಾರು?

ಬೆಂಗಳೂರು[ಮಾ.24]: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ತೇಜಸ್ವಿನಿ ಅನಂತಕುಮಾರ್‌ ಬದಲಾಗಿ, ಬಿಜೆಪಿ ಯುವ ಮುಖಂಡ ತೇಜಸ್ವಿ ಸೂರ್ಯ ಅವರು ಸ್ಪರ್ಧಿಸಿದರೆ ಆಗ ಕಾಂಗ್ರೆಸ್‌ನಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕಣಕ್ಕೆ ಇಳಿಯುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಅನುಕಂಪದ ಅಲೆಯ ಮೇಲಿರುವ ತೇಜಸ್ವಿನಿ ಅನಂತಕುಮಾರ್‌ ಅವರು ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ರಾಮಲಿಂಗಾರೆಡ್ಡಿ ಅವರು ಲೋಕಸಭೆಯಿಂದ ಸ್ಪರ್ಧಿಸಲು ಬಯಸಿರಲಿಲ್ಲ. ಆದರೆ, ತೇಜಸ್ವಿ ಸೂರ್ಯ ಸ್ಪರ್ಧಿಸಿದರೆ ಆಗ ರಾಮಲಿಂಗಾರೆಡ್ಡಿ ಕಣಕ್ಕೆ ಇಳಿಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಬಿಜೆಪಿ 2ನೇ ಪಟ್ಟಿಯಲ್ಲೂ ತೇಜಸ್ವಿನಿ ಹೆಸರಿಲ್ಲ: ಬೆಂ. ದಕ್ಷಿಣದಿಂದ ತೇಜಸ್ವಿ ಸೂರ್ಯ ಸ್ಪರ್ಧೆ?

ವಾಸ್ತವವಾಗಿ ರಾಮಲಿಂಗಾರೆಡ್ಡಿ ಅವರು ಲೋಕಸಭೆ ಅಖಾಡ ನನ್ನ ಆಯ್ಕೆಯಲ್ಲ. ರಾಜ್ಯ ರಾಜಕೀಯದಲ್ಲೇ ಇರುತ್ತೇನೆ ಎಂಬ ಕಾರಣ ನೀಡಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಹಿಂಜರಿದಿದ್ದರು. ಆದರೆ, ಈಗ ಬದಲಾದ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವರು ಕಣಕ್ಕೆ ಇಳಿಯುವ ಸಾಧ್ಯತೆಯೂ ಇದೆ ಎನ್ನುತ್ತವೆ ಮೂಲಗಳು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

click me!