2 ದಿನದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಬಿಜೆಪಿಗೆ ?

Published : Mar 18, 2019, 09:54 AM IST
2 ದಿನದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಬಿಜೆಪಿಗೆ ?

ಸಾರಾಂಶ

ಕಾಂಗ್ರೆಸ್ ಮಾಜಿ ಸಚಿವರೋರ್ವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಲು ಯತ್ನಿಸುತ್ತಿದ್ದು, ಶೀಘ್ರವೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗುತ್ತಿದೆ. 

ನವದೆಹಲಿ :  ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಗೋಕಾಕ್‌ನ ಕಾಂಗ್ರೆಸ್‌ ಶಾಸಕ ರಮೇಶ್‌ ಜಾರಕಿಹೊಳಿ ಅವರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 

ಒಂದೊಮ್ಮೆ ಅಮಿತ್‌ ಶಾ ಅವರಿಂದ ಹಸಿರು ನಿಶಾನೆ ಸಿಕ್ಕರೆ, ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷ ತೊರೆದು ಇನ್ನೆರಡು ದಿನಗಳಲ್ಲಿ ಬಿಜೆಪಿ ಸೇರಿದರೂ ಅಚ್ಚರಿಯಿಲ್ಲ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

ತಮ್ಮ ಸಂಬಂಧಿ ದೇವೇಂದ್ರಪ್ಪ ಅಥವಾ ಲಖನ್‌ ಜಾರಕಿಹೊಳಿಗೆ ಬಳ್ಳಾರಿ ಕ್ಷೇತ್ರದ ಟಿಕೆಟ್‌ ಕೊಡಿಸಲು ಸಹ ರಮೇಶ್‌ ಜಾರಕಿಹೊಳಿ, ಬಿಜೆಪಿ ಹೈಕಮಾಂಡ್‌ನನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ಆದರೆ, ಸದಕ್ಕೆ ರಮೇಶ್‌ ಜಾರಕಿಹೊಳಿಗೆ, ಬಿಜೆಪಿ ನಾಯಕರ ಭೇಟಿ ಸಾಧ್ಯವಾಗಿಲ್ಲ ಎನ್ನಲಾಗಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!