
ಹೈದರಾಬಾದ್, [ಮಾ.31]: ಹಾಲಿ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಲು ಪಕ್ಷವು ಕೋಟ್ಯಂತರ ರೂಪಾಯಿ ಡಿಮ್ಯಾಂಡ್ ಮಾಡುತ್ತಿದೆ ಎಂದು ಆರೋಪಿಸಿರುವ ಎಐಸಿಸಿ ಮಾಜಿ ಕಾರ್ಯದರ್ಶಿ ಸುಧಾಕರ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ.
AICC ಮಾಜಿ ಕಾರ್ಯದರ್ಶಿ ಹಾಗೂ ತೆಲಂಗಾಣ ಹಿರಿಯ ನಾಯಕ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರು ಇಂದು [ಭಾನುವಾರ] ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಪಕ್ಷದ ಸಂಪ್ರದಾಯ-ಮೌಲ್ಯಗಳು ಬದಲಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2018ರಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಗಳಲ್ಲಿ, ತದನಂತರ ಎಂಎಲ್ಸಿ, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಬದಲಾಗಿದೆ. ಇದನ್ನ ಪಕ್ಷದ ನಾಯಕರ ಗಮನಕ್ಕೆ ತರಲಾಗಿತ್ತು.
ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಮುಂದೆ ಇದನ್ನು ಹೈಕಮಾಂಡ್ ಗಮನಕ್ಕೆ ತರಲು ಯತ್ನಿಸಿದೆ. ಆದ್ರೆ ಪಕ್ಷದ ಮಿಡ್ಲ್ಮನ್ಗಳು ಇದಕ್ಕೆ ಅವಕಾಶ ಕಲ್ಪಿಸಲಿಲ್ಲ. ಇದರಿಂದ ಪಕ್ಷದ ಘನೆತೆಗೆ ಧಕ್ಕೆಯಾಗಿದೆ. ಹಾಗಾಗಿ ತಾನು ಅನಿವಾರ್ಯವಾಗಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.