
ಮುಂಬೈ(ಏ.12): ರಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಿತ್ರಪಕ್ಷ ಶಿವಸೇನೆ, ಈ ವಿಚಾರದಲ್ಲಿ ಬಿಜೆಪಿ ಮೌನವಾಗಿದ್ದಷ್ಟೂ ಒಳ್ಳೆಯದು ಎಂದು ಹೇಳಿದೆ.
ರಫೆಲ್ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂದಿರುವ ಶಿವಸೇನೆ, ಈ ಕುರಿತು ಬಿಜೆಪಿ ಮೌನವಾಗಿರುವುದೇ ಒಳ್ಳೆಯದು ಎಂದು ಸಲಹೆ ನೀಡಿದೆ.
ಇದೇ ವೇಳೆ ಮಹಾರಾಷ್ಟ್ರ ಸಚಿವರ ಸಮ್ಮುಖದಲ್ಲೇ ಬಿಜೆಪಿ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ಚುನಾವಣೆ ಸಮಯದಲ್ಲಿ ಒಗ್ಗಟ್ಟು ಪ್ರದರ್ಶಿಸದೇ ಹೋದಲ್ಲಿ ನಕಾರಾತ್ಮಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಸಮಾಧಾನ ಹೊರ ಹಾಕಿದೆ.