ತುಂಬ ದುಡಿದರು: ಪ್ರಿಯಾಂಕಾ, ರಾಹುಲ್ ಹೊಗಳಿದ ಶಿವಸೇನೆ!

Published : May 21, 2019, 03:30 PM IST
ತುಂಬ ದುಡಿದರು: ಪ್ರಿಯಾಂಕಾ, ರಾಹುಲ್ ಹೊಗಳಿದ ಶಿವಸೇನೆ!

ಸಾರಾಂಶ

ಪ್ರಿಯಾಂಕಾ, ರಾಹುಲ್ ಹಾಡಿ ಹೊಗಳಿದ ಶಿವಸೇನೆ| 'ಚುನಾವಣೆಯಲ್ಲಿ ರಾಹುಲ್, ಪ್ರಿಯಾಂಕಾ ಅವಿರತವಾಗಿ ದುಡಿದಿದ್ದಾರೆ'| ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುವುದು ಖಚಿತ ಎಂದ ಶಿವಸೇನೆ| ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಲಿ ಎಂದು ಆಶಯ| ರಾಹುಲ್, ಪ್ರಿಯಾಂಕಾ ಶ್ರಮಕ್ಕೆ ತಕ್ಕ ಫಲ ಸಿಗಲಿ ಎಂದ ಶಿವಸೇನೆ|

ಮುಂಬೈ(ಮೇ.21): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವಿರತವಾಗಿ ದುಡಿದಿದ್ದಾರೆ ಎಂದು ಶಿವಸೇನೆ ಹೊಗಳಿದೆ.

ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿರುವ ಶಿವಸೇನೆ, ರಾಹುಲ್ ಮತ್ತು ಪ್ರಿಯಾಂಕಾ ಅವಿರತವಾಗಿ ಶ್ರಮಿಸಿದ್ದು ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭರವಸೆ ವ್ಯಕ್ತಪಡಿಸಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸೀಟು ಗಳಿಸಲಿ ಎಂದು ಹಾರೈಸಿರುವ ಶಿವಸೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿ ಎಂಬುದು ತನ್ನ ಆಶಯ ಎಂದು ತಿಳಿಸಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!