ಶೋಭಾ ಕರಂದ್ಲಾಜೆ ಕ್ಷೇತ್ರ ಬದಲು..?

Published : Mar 20, 2019, 10:08 AM IST
ಶೋಭಾ ಕರಂದ್ಲಾಜೆ ಕ್ಷೇತ್ರ ಬದಲು..?

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಹಲವು  ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿದ್ದು, ಇದೇ ವೇಳೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆ ಪ್ರಸ್ತಾಪವೊಂದು ಕೇಳಿ ಬಂದಿದೆ. 

ಉಡುಪಿ :  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸ್ಥಳೀಯವಾಗಿ ಹೆಚ್ಚಿನ ವಿರೋಧ ಕಂಡು ಬಂದಿರುವುದರಿಂದ ಅವರನ್ನು ತುಮಕೂರಿನಿಂದ ಕಣಕ್ಕಿಳಿಸಬಹುದು ಎಂಬ ಪ್ರಸ್ತಾಪವೂ ಸಭೆಯಲ್ಲಿ ಬಂದಿದೆ ಎಂದು ಗೊತ್ತಾಗಿದೆ.

ದೇವೇಗೌಡರು ತುಮಕೂರಿನಿಂದ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅವರ ವಿರುದ್ಧ ಮಹಿಳೆಯೊಬ್ಬರನ್ನು ಅಭ್ಯರ್ಥಿಯನ್ನಾಗಿಸಿದರೆ ಗೌಡರಿಗೆ ಸೋಲು ಖಚಿತ ಎಂಬ ಮಾತಿದೆ. ಹೀಗಾಗಿ, ಶೋಭಾ ಅವರನ್ನೇ ತುಮಕೂರಿನ ಬಿಜೆಪಿ ಅಭ್ಯರ್ಥಿಯನ್ನಾಗಿಸಬೇಕು ಎಂಬ ಪ್ರಸ್ತಾಪವನ್ನು ಯಡಿಯೂರಪ್ಪ ಹೊರತುಪಡಿಸಿ ರಾಜ್ಯ ಬಿಜೆಪಿಯ ಇತರ ಹಿರಿಯ ನಾಯಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಆದರೆ, ಇದಕ್ಕೆ ಯಡಿಯೂರಪ್ಪ ಒಪ್ಪಿಕೊಳ್ಳುತ್ತಾರಾ ಎಂಬುದು ಕುತೂಹಲವಾಗಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!