ದೇವೇಗೌಡರ ಪರ ಸಿದ್ದರಾಮಯ್ಯ ಪ್ರಚಾರ

Published : Mar 28, 2019, 09:36 AM IST
ದೇವೇಗೌಡರ ಪರ ಸಿದ್ದರಾಮಯ್ಯ ಪ್ರಚಾರ

ಸಾರಾಂಶ

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ತುಮಕೂರು ಲೋಕಸಭಾ ಅಭ್ಯರ್ಥಿಯಾಗಿ ಎಚ್.ಡಿ ದೇವೇಗೌಡ ಸ್ಪರ್ಧೆ ಮಾಡಿದ್ದು, ಸಿದ್ದರಾಮಯ್ಯ ಗೌಡರ ಪರ ಪ್ರಚಾರ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ. 

ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ವಿವಿಧ ಪ್ರಮುಖ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಈಗಾಗಲೇ ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. 

ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ. ದೇವೇಗೌಡರ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಆಗಮಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. 

ಮೊದಲ ಹಂತದ ಪ್ರಚಾರ ಏ.4 ಮತ್ತು 5 ರಂದು ನಡೆಯಲಿದೆ. ಒಟ್ಟು ನಾಲ್ಕು ಅಥವಾ ಆರು ದಿನಗಳ ಕಾಲ ಪ್ರಚಾರ ಇರುತ್ತದೆ ಎಂದು ತಿಳಿಸಿದರು. 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಎರಡು ಮೈತ್ರಿಯಲ್ಲಿ ಚುನಾವಣೆ ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಪರಸ್ಪರ ಒಟ್ಟಾಗಿ ಪ್ರಚಾರ ಮಾಡುತ್ತಿದ್ದಾರೆ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!