‘ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಂ ಬಾಂಬ್‌ ಫಿಕ್ಸ್’

By Web Desk  |  First Published Apr 20, 2019, 1:04 PM IST

ರಾಜ್ಯದಲ್ಲಿ ಲೋಕಸಭಾ ಮಹಾ ಸಮರ ಕಾವೇರಿದ ಬೆನ್ನಲ್ಲೇ ಹಲವು ರೀತಿಯ ರಾಜಕೀಯ ಚರ್ಚೆಗಳಾಗುತ್ತಿವೆ. ಇದೇ ವೇಳೆ ಹಿರಿಯ ಮುಖಂಡರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ. 


ಕೊಪ್ಪಳ: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೇ ಟೈಮ್‌ ಬಾಂಬ್‌ ಫಿಕ್ಸ್‌ ಮಾಡಿದ್ದು, ಯಾವಾಗ ಬೇಕಾದರೂ ಸ್ಫೋಟಿಸಬಹುದು ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿದ್ದಾರೆ.

"

Tap to resize

Latest Videos

ಕೊಪ್ಪಳದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವನ್ನು ಬೇರೆ ಯಾರೂ ಪತನ ಮಾಡುವುದಿಲ್ಲ, ಅವರೇ ಮಾಡಿಕೊಳ್ಳುತ್ತಾರೆ. ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಾ ಬಂದಿರುವ ಸಿದ್ದರಾಮಯ್ಯ ಅವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದರು.

ರೇವಣ್ಣ ಅವರ ನಿಂಬೆ ಹಣ್ಣು ಏನು ಕೆಲಸ ಮಾಡುವುದಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ 14 ಕ್ಷೇತ್ರಕ್ಕೆ ಮತದಾನವಾಗಿದ್ದು, ಅದರಲ್ಲಿ 10 ಕ್ಷೇತ್ರಗಳಲ್ಲಿ ಜಯ ಸಾಧಿಸುತ್ತೇವೆ. ಹಾಗೆಯೇ ಎರಡನೇ ಹಂತದ ಚುನಾವಣೆ ಸೇರಿ 22 ಸ್ಥಾನಗಳಿಗೂ ಅಧಿಕ ಸ್ಥಾನಗಳಲ್ಲಿ ಜಯ ಸಾಧಿಸುತ್ತೇವೆ ಎಂದರು.

click me!