
ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದೆ.
ಉತ್ತರ ಪ್ರದೇಶದ ಎತವಾ ಕ್ಷೇತ್ರದ ಹಾಲಿ ಸಂಸದ ಅಶೋಕ್ ಕುಮಾರ್ ದೊಹ್ರೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷ ಸೇರಿದ್ದಾರೆ. ಇದರಿಂದ ಚುನಾವಣಾ ಬೆನ್ನಲ್ಲೇ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.
ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಮುಖಂಡರು ಪಕ್ಷಾಂತರ ಮಾಡುತ್ತಿದ್ದು, ವಿವಿಧ ಪಕ್ಷಗಳಲ್ಲಿ ಈ ರೀತಿಯ ಬೆಳವಣಿಗೆಗಳಾಗುತ್ತಿವೆ.
ಇನ್ನು ರಾಜ್ಯ ರಾಜಕೀಯದಲ್ಲಿಯೂ ಕೂಡ ಸಾಕಷ್ಟು ಮುಖಂಡರು ಪಕ್ಷ ಬಿಜೆಪಿಯಿಂದ ಕಾಂಗ್ರೆಸ್ ಗೆ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡುತ್ತಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...