ನಮಗೆ ಬೆದರಿಕೆ ಇದೆ, ನಮ್ಮ ಫೋನ್‌ ಟ್ಯಾಪ್‌ ಆಗ್ತಿದೆ: ಸುಮಲತಾ

By Web DeskFirst Published Mar 26, 2019, 7:38 AM IST
Highlights

ನಮಗೆ ಬೆದರಿಕೆ ಇದೆ, ನಮ್ಮ ಫೋನ್‌ ಟ್ಯಾಪ್‌ ಆಗ್ತಿದೆ: ಸುಮಲತಾ| ಚುನಾವಣಾ ಆಯೋಗಕ್ಕೂ ದೂರು ಸಲ್ಲಿಕೆ

 ಬೆಂಗಳೂರು[ಮಾ.26]: ನಮ್ಮ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ. ಮಂಡ್ಯ ಕ್ಷೇತ್ರದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಮತದಾರರಿಗೆ ವಿವಿಧ ರೀತಿಯ ಆಮಿಷವೊಡ್ಡಲಾಗುತ್ತಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಗಂಭೀರ ಆರೋಪ ಮಾಡಿದ್ದಾರೆ.

ಇದೇ ವೇಳೆ ಅವರು ‘ನನಗೆ ಜೀವ ಬೆದರಿಕೆ ಇದೆ, ರಕ್ಷಣೆ ಕೊಡಿ’ ಎಂದು ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ಸೋಮವಾರ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ ಅವರು ದೂರು ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಾಮಪತ್ರ ಸಲ್ಲಿಕೆಯ ಹಿಂದಿನ ದಿನದವರೆಗೂ ಜೆಡಿಎಸ್‌ ಮುಖಂಡರು ನನಗೆ ಕರೆ ಮಾಡುತ್ತಿದ್ದರು. ನೀವು ಮಂಡ್ಯದಲ್ಲಿ ಅವರ ವಿರುದ್ಧ (ನಿಖಿಲ್‌ ಹೆಸರು ಹೇಳದೆ) ಸ್ಪರ್ಧೆ ಮಾಡುವುದು ಸರಿಯಲ್ಲ. ನೀವು ಸ್ಪರ್ಧೆ ಮಾಡಿದರೆ ಏನು ಬೇಕಾದರೂ ಮಾಡುತ್ತಾರೆ ಎಂಬ ಬೆದರಿಕೆ ಒಡ್ಡಿದ್ದರು ಎಂದು ಹೇಳಿದರು.

ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ ಆರಂಭದ ದಿನದಿಂದಲೂ ನನ್ನ ಮತ್ತು ಜತೆಗಿರುವವರ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ. ನಮ್ಮ ಚಲನವಲನದ ಮೇಲೆ 24 ಗಂಟೆಯೂ ಗುಪ್ತಚರ ಇಲಾಖೆಯನ್ನು ಬಿಟ್ಟಿದ್ದಾರೆ. ಪ್ರತಿಯೊಂದರ ವಿವರವನ್ನೂ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿರುವವರಿಗೆ ಇಂತಹ ಕೆಲಸ ಮಾಡುವುದು ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.

ನಮಗೆ ಬೆದರಿಕೆ ಇದ್ದು, ರಕ್ಷಣೆ ಇಲ್ಲದಂತಾಗಿದೆ. ಮಂಡ್ಯದಲ್ಲಿ ಪಾರದರ್ಶಕ ಚುನಾವಣೆಗೆ ಆಯೋಗವು ಹೆಚ್ಚಿನ ಅಧಿಕಾರಿಗಳನ್ನು ನಿಯೋಜಿಸಬೇಕು. ನನ್ನ ಬೆಂಬಲಿಗರು ಎಲ್ಲಿ ಹೋಗುತ್ತಾರೆ, ನಾನು ಯಾರ ಬಳಿ ಮಾತನಾಡುತ್ತೇನೆ ಎಂಬುದೆಲ್ಲದರ ಕುರಿತು ಗುಪ್ತಚರರ ಮೂಲಕ ನಿಗಾವಹಿಸಲಾಗುತ್ತಿದೆ. ಈ ವಿಚಾರವನ್ನು ಮುಖ್ಯ ಚುನಾವಣಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಹೆಚ್ಚಿನ ಭದ್ರತೆಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಅಧಿಕಾರ ದುರುಪಯೋಗ:

ಲೋಕಸಭೆ ಚುನಾವಣೆಯಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಆಡಳಿತವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದೂ ಇದೇ ವೇಳೆ ಸುಮಲತಾ ಅವರು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಆಡಳಿತವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮತದಾರರಿಗೆ ವಿವಿಧ ಆಮಿಷಗಳನ್ನು ಒಡ್ಡಲಾಗುತ್ತಿದೆ. ಇದನ್ನು ಆಯೋಗವು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಸೂಕ್ತವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು. ಬೆದರಿಕೆಯ ಹೇಳಿಕೆಗಳು ಹೆಚ್ಚಾಗುತ್ತಿದ್ದು, ಪ್ರಚಾರಕ್ಕೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ದೊರಕಿರುವ ಅಧಿಕಾರವನ್ನು ರಾಜ್ಯದ ಅಭಿವೃದ್ಧಿ ಹಾಗೂ ಜನರ ಹಿತಾಸಕ್ತಿ ಕಾಪಾಡಲು ಬಳಕೆ ಮಾಡಬೇಕು. ಆದರೆ, ಮಂಡ್ಯ ಕ್ಷೇತ್ರದಲ್ಲಿ ಅಧಿಕಾರದ ದುರುಪಯೋಗವಾಗುತ್ತಿದೆ. ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡಲಾಗುತ್ತಿದೆ. ಜೆಡಿಎಸ್‌ ಸಮಾವೇಶಕ್ಕೆ ಬಸ್‌, ಕಾರ್‌, ಬೈಕ್‌ನಲ್ಲಿ ಬರುವವರಿಗೆ ಇಂತಿಷ್ಟುಹಣ ಎಂದು ನಿಗದಿಗೊಳಿಸಿ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಮೂಲಕ ಕ್ಷೇತ್ರದ ಜನತೆಯನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಅಭಿವೃದ್ಧಿ ಮೂಲಕ ಮತ ಪಡೆಯಲು ಪ್ರಯತ್ನಿಸಬೇಕು. ಆದರೆ ಮಂಡ್ಯದಲ್ಲಿ ಅಂತಹ ಕೆಲಸ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಆಯೋಗವು ಗಮನಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

click me!