ಕುಮಾರಸ್ವಾಮಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಸುಮಲತಾ ಅಂಬರೀಶ್

Published : Mar 28, 2019, 09:20 PM ISTUpdated : Mar 28, 2019, 09:58 PM IST
ಕುಮಾರಸ್ವಾಮಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಸುಮಲತಾ ಅಂಬರೀಶ್

ಸಾರಾಂಶ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಸಿಎಂ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯ, [ಮಾ.28]: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್  ತೀವ್ರ ಪೈಪೋಟಿ ನೀಡುತ್ತಿರುವ ಸುಮಲತಾ ಅಂಬರೀಶ್, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಸುಮಲತಾ ಅಂಬರೀಶ್ ಭಾರೀ ಪೈಟೋಟಿ ನೀಡುತ್ತಿದ್ದಾರೆ.

 ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ ಸಿಎಂ ಕುಮಾರಸ್ವಾಮಿ ಅವರು ಹೇಗಾದರೂ ಮಾಡಿ ಪುತ್ರ ನಿಖಿಲ್ ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಆರೋಪಿಸಿದ್ದಾರೆ.

ಫೋನ್ ಟ್ಯಾಪ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ನನ್ನ ಪಿನ್ ಟು ಪಿನ್ ಮಾಹಿತಿ ತಿಳಿಯಲು ಗೂಢಚಾರಿಗಳನ್ನು ಬಿಟ್ಟಿದ್ದಾರೆ ಎಂದು ಸುಮಲತಾ ಅವರು ಸಿಎಂ ವಿರುದ್ಧ ಆರೋಪ ಮಾಡಿದ್ದರು. ಇದೀಗ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ನನ್ನ ವಿರುದ್ಧ ಸಿಐಡಿ ಕೆಲಸ ಮಾಡುವಂತೆ ಮಾಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಆರ್ ನಗರದ ಸಿದ್ದೇಗೌಡನ ಕೋಪ್ಪಲಿನಲ್ಲಿ ಪ್ರಚಾರದ ವೇಳೆ ಮಾತನಾಡಿದ ಸುಮಲತಾ ಅವರು, ನನ್ನ ವಿರುದ್ಧ ಸಿಐಡಿ ಕೆಲಸ ಮಾಡುವಂತೆ ಮಾಡಿದ್ದಾರೆ.  ನನಗೆ ಸಂಬಂಧಪಟ್ಟ ಮಾಹಿತಿಯನ್ನ  ತೆಗೆಯುವುದಕ್ಕೆ ಸಿಐಡಿ ಕೆಲಸ ಮಾಡ್ತಿದೆ. ನನಗೆ ಎಲ್ಲವೂ ಗೊತ್ತಿದೆ ಎಂದು ಕುಮಾರಸ್ವಾಮಿ ಅವರ ಹೆಸರು ಹೇಳಿದೆ ಆರೋಪಿಸಿದರು.

ದಯವಿಟ್ಟು 2 ನಿಮೀಷ ನನ್ನ ಫೋಟೋ ನೋಡಿ ವೋಟ್ ಹಾಕಿ. ಯಾಕಂದ್ರೆ 3 ಜನ ಸುಮಲತಾರನ್ನ ನನ್ನ ವಿರುದ್ಧ ನಿಲ್ಲಿಸಿದ್ದಾರೆ ಎಂದು ಸಿದ್ದೇಗೌಡನ ಕೋಪ್ಪಲಿನಲ್ಲಿ ಮತದಾರರಲ್ಲಿ ಮನವಿ ಮಾಡಿದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!