ಇಬ್ರಾಹಿಂ-ಯಡಿಯೂರಪ್ಪ ನಡುವೆ 'ಗಂಡಸ್ತನ'ದ ಕಿತ್ತಾಟ

Published : Apr 03, 2019, 07:56 PM IST
ಇಬ್ರಾಹಿಂ-ಯಡಿಯೂರಪ್ಪ ನಡುವೆ 'ಗಂಡಸ್ತನ'ದ ಕಿತ್ತಾಟ

ಸಾರಾಂಶ

ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಮತ್ತು ಬಿಎಸ್ ಯಡಿಯೂರಪ್ಪ ನಡುವೆ  'ಗಂಡಸ್ತನ'ದ ಕಿತ್ತಾಟ ಜೋರಾಗಿದೆ.

ಬೀದರ್, [ಏ.03]: ಬಿಜೆಪಿಯಲ್ಲಿ ಗಂಡಸರೇ ಇಲ್ಲ ಎಂಬ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಕತ್ ಟಾಂಗ್ ಕೊಟ್ಟಿದ್ದಾರೆ. 

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಯಾರ ಹತ್ತಿರ ಗಂಡಸ್ತನ ಇದೆ ಎಂಬುದು ಗೊತ್ತಾಗಲಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

ಬೀದರ್ ನಗರದ ಗಣೇಶ ಮೈದಾನದಲ್ಲಿ ಆಯೋಜಿಸಿದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ಅವರು 1 ಲಕ್ಷ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಆಗ ಕಾಂಗ್ರೆಸ್ ನಾಯಕರಿಗೆ  ಗಂಡಸ್ತನ ಯಾರ ಹತ್ರ ಇದೆ ಎನ್ನುವುದು ತಿಳಿಯಲಿದೆ ಎಂದು ತಿರುಗೇಟು ನೀಡಿದರು. 

ಮಂಡ್ಯ ರಾಜಕಾರಣದಲ್ಲಿ ಸುಮಲತಾ ಅಂಬರೀಶ್ ಅವರನ್ನು ಅವಮಾನಿಸುತ್ತಿರುವ  ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಜಾತಿ ರಾಜಕಾರಣದ ಮಾತನಾಡಿ ಎಲ್ಲರನ್ನು ಅಪಮಾನ ಮಾಡುತ್ತಿದ್ದು,‌ ಜನ ತಿರುಗಿ ಬಿದ್ದಿದ್ದಾರೆ. 

 ಮಂಡ್ಯದಲ್ಲಿ ಸುಮಲತಾ ಗೆದ್ದೆ ಗೆಲ್ಲುತ್ತಾರೆ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!