
ಉಡುಪಿ: ಚಿಕ್ಕಮಗಳೂರು - ಉಡುಪಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಎಐಸಿಸಿ ಸದಸ್ಯ ಅಮೃತ್ ಶೆಣೈ ಅಮಾನತು ಮಾಡಲಾಗಿದೆ.
ಅಮೃತ್ ಶೆಣೈ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಹಿನ್ನೆಲೆಯಲ್ಲಿ ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ.
ಮೈತ್ರಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಬಂಡಾಯ ಸ್ಪರ್ಧೆ ಮಾಡಿದ್ದರು.
ಇದರಿಂದ ಅಮೃತ್ ಶೆಣೈ ಪ್ರಮೋದ್ ಮಧ್ವರಾಜ್ ವಿರುದ್ದ ಕಣಕ್ಕಿಳಿದಿದ್ದಾರೆ. ಇದರಿಂದ ಅವರನ್ನು ಪಕ್ಷದಿಂದ ಅಮಾತು ಮಾಡಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಜಿ ಶಫಿವುಲ್ಲಾ ಆದೇಶ ನೀಡಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...