ಉಮೇಶ್ ಜಾಧವ್ ಅವರ ರಾಜೀನಾಮೆ ಅಂಗೀಕಾರವಾಗಿದೆ. ಇದ್ರಿಂದ ಲೋಕಸಭಾ ಚುನಾವಣೆಗೆ ಸ್ಫರ್ಧಿಸಲು ಯಾವುದೇ ಅಡೆತಡೆಗಳಿಲ್ಲ.
ಬೆಂಗಳೂರು, (ಏ.01): ಕೊನೆಗೂ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರವಾಗಿದೆ.
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದ ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ್ ಅವರ ರಾಜೀನಾಮೆಯನ್ನು ಇಂದು (ಸೋಮವಾರ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿದ್ದಾರೆ.
Karnataka Legislative Assembly Speaker, K.R Ramesh Kumar has accepted the resignation of former Congress MLA Dr Umesh Jadhav. The latter had submitted his resignation from the membership of the State Legislative Assembly on March 4.
— ANI (@ANI)ರಾಜೀನಾಮೆ ಗುಟ್ಟು ರಟ್ಟು ಮಾಡಿದ ಉಮೇಶ್ ಜಾಧವ್
ಮೈತ್ರಿ ಸರ್ಕಾರ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಉಮೇಶ್ ಜಾಧವ್, ಕಾಂಗ್ರೆಸ್ ನಾಯಕರ ಮೇಲೆ ಮುನಿಸಿಕೊಂಡು ಕೆಲ ದಿನಗಳ ಹಿಂದಷ್ಟೇ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಬಳಿಕ ಉಮೇಶ್ ಜಾಧವ್ ಕಲಬುರಗಿಯಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ್ದರು. ಇದೀಗ ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಕಾಂಗ್ರೆಸ್ ತೊರೆದಿದ್ದಲ್ಲದೇ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದು ಕಾಂಗ್ರೆಸ್ ನಾಯಕರನ್ನ ಕೆರಳಿಸಿತ್ತು. ಈ ಹಿನ್ನಲೆಯಲ್ಲಿ ಪಕ್ಷಾಂತರ ಕಾಯ್ದೆ ಅಡಿಯಲ್ಲಿ ಉಮೇಶ್ ಜಾಧವ್ ಅವರನ್ನು ಅನರ್ಹ ಮಾಡಲೇಬೇಕೆಂದು ರಾಜ್ಯ ಕಾಂಗ್ರೆಸ್ ಪಣತೊಟ್ಟಿತ್ತು. ಆದ್ರೆ ಅದು ಸಫಲವಾಗಿಲ್ಲ.