ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಐವರ ಪಟ್ಟಿ ಸಿದ್ಧಗೊಳಿಸಿದ್ದು, ಅವರ ಪೈಕಿ ಗೆಲ್ಲಿವ ಅಭ್ಯರ್ಥಿ ಹುಡುಕಾಟಕ್ಕೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ಹೇಳಿದರು.
ಉತ್ತರ ಕನ್ನಡ (ಫೆ.18): ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಗೆಲ್ಲುವ ಅಭ್ಯರ್ಥಿಗಳನ್ನು ಪಟ್ಟಿ ಮಾಡಲಾಗಿದ್ದು, ಒಟ್ಟು 5 ಆಕಾಂಕ್ಷಿಗಳ ಹೆಸರು ಕಳಿಸಲಾಗಿದೆ. ಜಿಲ್ಲೆಯಲ್ಲಿ ಮೊದಲ ಹಂತವಾಗಿ ಐದು ಅಭ್ಯರ್ಥಿಗಳ ಪೈಕಿ ಗೆಲ್ಲುವ ಅಭ್ಯರ್ಥಿ ಯಾರೆಂದು ಸಮೀಕ್ಷೆ ಮಾಡಲಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು 5 ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪಕ್ಷದ ಹೈಕಮಾಂಡ್‌ಗೆ ಪಟ್ಟಿ ನೀಡಲಾಗಿದ್ದು, ಅದರ ಮೇಲೆ ಸರ್ವೆ ಕೆಲಸ ಆರಂಭಿಸುವುದಕ್ಕೆ ಚರ್ಚೆ ನಡೆದಿದೆ. ಜಿಲ್ಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಶಾಸಕರ ಜೊತೆ ಮಾತನಾಡಲಾಗಿದೆ. ಬಿಜೆಪಿ ಧರ್ಮಗಳ ಆಧಾರದ ಮೇಲೆ ರಾಜಕೀಯ ಮಾಡುತ್ತಿದ್ದು, ಅದನ್ನೇ ಫೋಕಸ್ ಮಾಡುತ್ತಿದೆ ಎಂದು ತಿಳಿಸಿದರು.
ಬಿಬಿಎಂಪಿ ಉಚಿತ ಲ್ಯಾಪ್‌ಟಾಪ್‌ಗೆ ಮತ್ತೊಮ್ಮೆ ದಾಖಲೆ ಸಲ್ಲಿಸಲು ಅವಕಾಶ
ಬಿಜೆಪಿ ಧರ್ಮಗಳ ಆಧಾರದಲ್ಲಿ ರಾಜಕೀಯ ಮಾಡುತ್ತಿದ್ದು, ದಕ್ಷಿಣ ಭಾರತದಲ್ಲಿ ಅದು ನಡೆಯೋದಿಲ್ಲ. ರಾಜ್ಯದ ಕೆಲವೆಡೆ ಮಾತ್ರ ಧರ್ಮಗಳ ಆಧಾರದ ರಾಜಕೀಯ ನಡೆದರೂ ಬಹುತೇಕ ಕಡೆ ಅದು ಸಾಧ್ಯವಿಲ್ಲ. ಯಾವ ರೀತಿಯಲ್ಲಿ ಕುಮಾರಸ್ವಾಮಿ ಅವರು ಲೆಕ್ಕ ಚುಕ್ತಾ ಮಾತನಾಡಿದ್ದಾರೆ ಎಂಬುದು ತಿಳಿದಿಲ್ಲ. ಅವರು ನಮಗೆ ಮತ ಹಾಕಿ ಲೆಕ್ಕಾ ಚುಕ್ತಾ ಮಾಡಿದಲ್ಲಿ ಚುನಾವಣೆಯಲ್ಲಿ ಹೆಚ್ಚುವರಿ ಮತ ಬರಲಿದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಹಾಗೂ ಅಭಿವೃದ್ಧಿ ಶಿಫಾರಸ್ಸು ಮಾಡಲು ಸಮಿತಿ ರಚನೆ ಮಾಡಲಾಗುತ್ತಿದೆ. ಇನ್ನು 3 ತಿಂಗಳ ಕಾಲಾವಕಾಶ ನೀಡಿ, ಅದರ ಆಧಾರದಲ್ಲಿ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿಗೆ ಹೊಸ ರೂಪ ನೀಡಲು ಪೂರಕವಾಗಿ ಬಿಬಿಎಂಪಿ ಬಜೆಟ್ ಮಂಡನೆ: ಡಿಕೆ ಶಿವಕುಮಾರ್
ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ರಣತಂತ್ರ:
ರಾಜ್ಯದ ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಈ ಬಾರಿ ಗೆಲ್ಲಲು ಕಠಿಣ ಕಸರತ್ತುಗಳನ್ನು ಮಾಡುತ್ತಿದೆ. ಕಳೆದ ಬಾರಿ ಕೇವಲ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಈ ಬಾರಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲುವುದಕ್ಕೆ ಕಸರತ್ತು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳ ಉಸ್ತುವಾರಿಗಳಿಗೂ ಟಾಸ್ಕ್ ನೀಡಲಾಗಿದ್ದು, ಅವರು ಚುನಾವಣಾ ಕಾರ್ಯತಂತ್ರವನ್ನು ಒಂದೊಂದಾಗಿ ಕಾರ್ಯಗತಗೊಳಿಸಲು ಮುಂದಾಗಿದ್ದಾರೆ. ಜನರ ಕೆಂಗಣ್ಣಿಗೆ ಗುರಿಯಾಗಿರುವ ಹಾಗೂ ಅಭಿವೃದ್ಧಿಯಿಂದ ವಂಚಿತವಾಗಿರುವ ಬಿಜೆಪಿ ಸಂಸದರ ಕ್ಷೇತ್ರಗಳನ್ನು ಹುಡುಕಿ ಅಲ್ಲಿ ಗೆಲ್ಲುವ ರಣತಂತ್ರವನ್ನು ರೂಪಿಸುತ್ತಿದೆ.