ವೈರಲ್ ಚೆಕ್| ಇವಿಎಂಗಳನ್ನು ಅಕ್ರಮವಾಗಿ ಸಾಗಣೆ ಮಾಡಿದ ಬಿಜೆಪಿ?

Published : Mar 30, 2019, 11:10 AM IST
ವೈರಲ್ ಚೆಕ್| ಇವಿಎಂಗಳನ್ನು ಅಕ್ರಮವಾಗಿ ಸಾಗಣೆ ಮಾಡಿದ ಬಿಜೆಪಿ?

ಸಾರಾಂಶ

ನಂಬರ್‌ ಪ್ಲೇಟ್‌ ಇಲ್ಲದ ಶಾಲಾ ವಾಹನ ಮತ್ತು 3 ಬೊಲೆರೋ ಜೀಪ್‌ಗಳಲ್ಲಿ ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌(ಇವಿಎಂ)ಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ವಿಡಿಯೋ ಬಹಿರಂಗವಾಗಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಇದು ನಿಜಾನಾ? ಇಲ್ಲಿದೆ ವಿವರ

ನವದೆಹಲಿ[ಮಾ.30]: ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಮತ್ತು ಭಾರತೀಯ ಚುನಾವಣಾ ಆಯೋಗದ ಪಿತೂರಿ ಬಯಲಾಗಿದೆ. ನಂಬರ್‌ ಪ್ಲೇಟ್‌ ಇಲ್ಲದ ಶಾಲಾ ವಾಹನ ಮತ್ತು 3 ಬೊಲೆರೋ ಜೀಪ್‌ಗಳಲ್ಲಿ ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌(ಇವಿಎಂ)ಗಳನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ವಿಡಿಯೋ ಬಹಿರಂಗವಾಗಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ನೂರಾರು ಇವಿಎಂ ಮಷಿನ್‌ಗಳು ಬಸ್‌ಗಳಲ್ಲಿ ತುಂಬಿರುವ ದೃಶ್ಯವಿದೆ. ಈ ವಿಡಿಯೋ ಬಾರಿ ವೈರಲ್‌ ಆಗುತ್ತಿದೆ.

ಸ್ಟ್ರಾಂಗ್‌ ರೂಮ್‌ನಲ್ಲಿ ಇವಿಎಂ ಇಡುವ ಮುಂಚೆ ಮೋದಿ, ಶಾ ಮತ್ತು ಚುನಾವಣಾ ಆಯೋಗದ ನಡುವೆ ಪಿತೂರಿ ನಡೆದಿದೆ ಎಂದು ಆರೋಪಿಸಲಾಗಿದೆ. ಆದರೆ ಈ ವಿಡಿಯೋ ಈ ಬಾರಿಯ ಲೋಕಸಭಾ ಚುನಾವಣೆಯದ್ದೇ ಎಂದು ಆಲ್ಟನ್ಯೂಸ್‌ ಸುದ್ದಿ ಸಂಸ್ಥೆ ಪರಿಶೀಲಿಸಿದಾಗ ಇದು ಹಳೆಯ ವಿಡಿಯೋ ಎಂದು ತಿಳಿದುಬಂದಿದೆ. 2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡಿತ್ತು.

ಬಿಜೆಪಿ ಈ ಇವಿಎಂಗಳನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿತ್ತು. ಆಗ ಮಧ್ಯಪ್ರದೇಶ ಚುನಾವಣಾ ಆಯೋಗ ಸ್ಪಷ್ಟನೆಯನ್ನೂ ನೀಡಿತ್ತು. ಸದ್ಯ ಅದೇ ವಿಡಿಯೋವನ್ನು 2019ರ ಲೋಕ ಚುನಾವಣೆ ವೇಳೆ ಸುಳ್ಳು ಸುದ್ದಿ ಹಬ್ಬಿಸಲು ಬಳಸಿಕೊಳ್ಳಲಾಗುತ್ತಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!