ಅಡ್ವಾಣಿ ಕ್ಷೇತ್ರದಲ್ಲಿ ಅಮಿತ್ ಶಾ ಸ್ಪರ್ಧೆ? ಅಡ್ವಾಣಿಗಿಲ್ವಾ ಗಾಂಧಿನಗರ?

Published : Mar 21, 2019, 04:40 PM IST
ಅಡ್ವಾಣಿ ಕ್ಷೇತ್ರದಲ್ಲಿ ಅಮಿತ್ ಶಾ ಸ್ಪರ್ಧೆ? ಅಡ್ವಾಣಿಗಿಲ್ವಾ ಗಾಂಧಿನಗರ?

ಸಾರಾಂಶ

ಅಡ್ವಾಣಿ ಕ್ಷೇತ್ರದಲ್ಲಿ ಅಮಿತ್ ಶಾ ಸ್ಪರ್ಧೆ| ಹಿರಿಯ ಬಿಜೆಪಿ ನಾಯಕನಿಗಿಲ್ವಾ ಕ್ಷೇತ್ರ?| ಜೋಷಿ ಸ್ಪರ್ಧೆಯೂ ಡೌಟ್

ನವದೆಹಲಿ[ಮಾ.21]: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ ಪಕ್ಷಗಳು ಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಕಯಕದಲ್ಲಿ ತೊಡಗಿದ್ದಾರೆ. ಬಹುತೇಕ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿವೆ ಆದರೆ ಗುಜರಾತ್ ಬಿಜೆಪಿ ಮಾತ್ರ ಗಾಂಧಿನಗರ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯ ಹೆಸರನ್ನು ಪಕ್ಷದ ಕೇಂದ್ರ ಸಮಿತಿಗೆ ಸೂಚಿಸಿಲ್ಲ. ಸದ್ಯ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಗಾಂಧಿನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಆದರೆ ಮುಂಬರುವ ಲೋಕಸಭಾ ಚುನಾವಣೆಗೆ ಈ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯ ಹೆಸರನ್ನು ಬಿಜೆಪಿಯ ಪ್ರಾದೇಶಿಕ ಪಕ್ಷ ಅಂತಿಮಗೊಳಿಸದಿರುವುದರಿಂದ ಪಕ್ಷದ ಕೇಂದ್ರೀಯ ನಾಯಕರೇ ಅಂತಿಮಗೊಳಿಸಲಿದ್ದಾರೆ.

ಲಭ್ಯವಾದ ಮಾಹಿತಿ ಅನ್ವಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ಪ್ರಸ್ತುತ ರಾಜ್ಯಸಭಾ ಸಂಸದರಾಗಿರುವ ಅಮಿತ್ ಶಾ ಗಾಂಧಿನಗರ ಸಂಸದೀಯ ಕ್ಷೇತ್ರದಲ್ಲಿ ಬರುವ ನಾರಣ್ಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

ಅಮಿತ್ ಶಾ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಿದರೆ ಬಿಜೆಪಿಯ ಮಿಷನ್ 26 ಯಶಸ್ವಿಯಾಗಲು ಸಾಧ್ಯವಾಗಬಹುದೆಂಬ ನಿಟ್ಟಿನಲ್ಲಿ ಪಕ್ಷ ಈ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ.

91 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಪ್ರಸ್ತುತ ಬಿಜೆಪಿ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಚುನಾವಣೆಗಯಲ್ಲಿ ಸ್ಪರ್ಧಿಸುವ ಕುರಿತಾಗಿ ಕೆಲ ಪ್ರಶ್ನೆಗಳು ಎದ್ದಿದ್ದವು. ಈ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದ್ದ ಪಕ್ಷವು ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ನಿರ್ಧಾರ ಅವರಿಗೇ ಬಿಟ್ಟುಕೊಡಲಾಗಿದೆ ಎಂದಿತ್ತು. ಲಭ್ಯವಾದ ಮಾಹಿತಿ ಅನ್ವಯ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷವು ಈವರೆಗೂ ಅಡ್ವಾಣಿಯವರನ್ನು ಸಂಪರ್ಕಿಸಿಲ್ಲ ಎನ್ನಲಾಗಿದೆ. ಜೋಷಿಯವರು ಕೂಡಾ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನವೆನ್ನಲಾಗಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!