ಬಿಜೆಪಿಗೆ ಮತ ಹಾಕಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ಯುವಕನಿಗೆ ಮನ ಬಂದಂತೆ ಥಳಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ : ಬಿಜೆಪಿಗೆ ಮತ ಹಾಕಿದ್ದಾನೆ ಎಂದು ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರಿನ ಮತಗಟ್ಟೆ ಬಳಿಯೇ ಅಟ್ಟಾಡಿಸಿ ಥಳಿಸಲಾಗಿದ್ದು, ಇದರಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಂಭುಲಿಂಗಪ್ಪ ಹನ್ಮಂತಪ್ಪ ಹೆಗ್ಗಣ್ಣವರ್ ಗಾಯಗೊಂಡಿದ್ದು, ಕಾಂಗ್ರೆಸಿಗರಿಂದ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ಸಂಜೆ ವೇಳೆಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದ ಯುವಕ ಬಳಿಕ ಬಿಜೆಪಿ ಬೆಂಬಲಿಸತೊಡಗಿದ್ದ. ಇದರಿಂದ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಶಂಭುಲಿಂಗ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ’