ಅಪ್ಪ ಹುಟ್ಟುಹಬ್ಬದಂದು ಮಗನ ಸಿನಿಮಾ!

Published : Apr 18, 2019, 09:50 AM IST
ಅಪ್ಪ ಹುಟ್ಟುಹಬ್ಬದಂದು ಮಗನ ಸಿನಿಮಾ!

ಸಾರಾಂಶ

ಅಭಿಷೇಕ್‌ ಅಂಬರೀಶ್‌ ಅವರನ್ನು ಹೀರೋ ಆಗಿ ಬೆಳ್ಳಿತೆರೆಗೆ ಪರಿಚಯಿಸುತ್ತಿರುವ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ ‘ಅಮರ್‌’ ಬಿಡುಗಡೆಗೆ ದಿನಾಂಕ ಫಿಕ್ಸ್‌ ಆಗಿದೆ. ಮೇ 31ಕ್ಕೆ ಈ ಚಿತ್ರ ತೆರೆಗೆ ಬರುತ್ತಿದೆ.

ಮೇ. 29ಕ್ಕೆ ಅಂಬರೀಶ್‌ ಅವರ ಹುಟ್ಟುಹಬ್ಬ. ಅವರಿಲ್ಲದ ಮೊದಲ ಹುಟ್ಟುಹಬ್ಬದ ಆಚರಣೆಯಿದು. ಅದರ ಮರುದಿನವೇ ಚಿತ್ರ ತಂಡ ‘ಅಮರ್‌’ ಬಿಡುಗಡೆಗೆ ದಿನಾಂಕ ಫಿಕ್ಸ್‌ ಮಾಡಿದೆ. ಅಂಬರೀಶ್‌ ಪುತ್ರ ಅಭಿಷೇಕ್‌ ಅಂಬರೀಶ್‌ ಅವರ ಬೆಳ್ಳಿತೆರೆ ಪ್ರವೇಶದ ಸಿನಿಮಾ ಎನ್ನುವುದರ ಜತೆಗೆ ನಾಗಶೇಖರ್‌ ನಿರ್ದೇಶನವೂ ಇಲ್ಲಿ ಕುತೂಹಲ ಹುಟ್ಟಿಸಿದೆ. ಈಗಾಗಲೇ ಈ ಚಿತ್ರ ಹಾಡುಗಳ ಮೂಲಕ ಸಖತ್‌ ಸದ್ದು ಮಾಡಿದೆ.

ಸಂದೇಶ್‌ ಕಂಬೈನ್ಸ್‌ ಮೂಲಕ ಸಂದೇಶ್‌ ಈ ಚಿತ್ರವನ್ನು ನಿರ್ಮಿಸಿದ್ದು, ಬೆಂಗಳೂರು, ಮೈಸೂರು, ಮಡಿಕೇರಿ, ಮಂಗಳೂರು, ಮಣಿಪಾಲ, ಊಟಿ, ಕೇರಳ, ಕೊಯಮತ್ತೂರು, ಹಾಗೂ ಸಿಂಗಾಪುರ, ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣಗೊಂಡಿದೆ. ನಿರ್ದೇಶಕ ನಾಗಶೇಖರ್‌ ಅವರೇ ಕತೆ, ಚಿತ್ರಕತೆ ಹಾಗೂ ಸಂಭಾಷಣೆ ಬರೆದಿದ್ದಾರೆ. ದರ್ಶನ್‌ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಅಮರ್ ಚಿತ್ರಕ್ಕೆ ಸೆನ್ಸಾರ್ ಗ್ರೀನ್ ಸಿಗ್ನಲ್!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಪಘಾತದಲ್ಲಿ ತಂದೆ ಆಸ್ಪತ್ರೆ ದಾಖಲಾದ ಬೆನ್ನಲ್ಲೇ ರಾಜ್ಯ ಪ್ರಶಸ್ತಿ ವಿಜೇತ ಯುವ ನಟ ಶವವಾಗಿ ಪತ್ತೆ
ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ