
ಬೆಂಗಳೂರು(ಜು.20): ಉಸಿರಾಟದ ಸಮಸ್ಯೆಯಿಂದಾಗಿ ನಟ,ಶಾಸಕ ಅಂಬರೀಶ್ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಎರಡು ದಿನಗಳ ಹಿಂದಷ್ಟೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಆರೋಗ್ಯದ ಸಮಸ್ಯೆಯಿದ್ದ ಕಾರಣ ಅಂಬರೀಶ್ ವಿಧಾನಸೌಧಕ್ಕೆ ವ್ಹೀಲ್'ಚೇರ್ ಮೇಲೆ ಆಗಮಿಸಿ ಮತದಾನ ಮಾಡಿದ್ದರು. 2 ವರ್ಷಗಳ ಹಿಂದಷ್ಟೆ ಸಚಿವರಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಆರೋಗ್ಯ ಸಮಸ್ಯೆ ಉಂಟಾಗಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.