ಶ್ರೇಯಸ್ ಮಂಜು 'ದಿಲ್‌ದಾರ್'ಸಿನಿಮಾದ ಭಜರಂಗಿ ಲೋಕಿ ಲುಕ್ ರಿವೀಲ್; ಹುಟ್ಟುಹಬ್ಬಕ್ಕೆ ಕೊಡುಗೆ!

Published : May 31, 2025, 12:37 PM ISTUpdated : May 31, 2025, 01:04 PM IST
Bhajarangi Loki

ಸಾರಾಂಶ

ಇದು ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಇದರಲ್ಲಿ ಭಜರಂಗಿ ಲೋಕಿ ವಿಲನ್ ಆಗಿ ಅಬ್ಬರಿಸಿದ್ದಾರೆಂಬ ವಿಚಾರ ಈ ಹಿಂದೆಯೇ ಬಯಲಾಗಿತ್ತು. ಲೋಕಿ ಇದುವರೆಗೂ ಸಾಕಷ್ಟು ಬಗೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ನಾನಾ ಶೇಡುಗಳಲ್ಲಿ ವಿಲನ್ ಆಗಿ ಆರ್ಭಟಿಸಿದ್ದಾರೆ. ದಿಲ್ ದಾರ್ ನಲ್ಲಿ..

ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್ ದಾರ್'. ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಗೆ ಅಣಿಗೊಂಡಿರುವ ಚಿತ್ರತಂಡವೀಗ ಭಜರಂಗಿ ಲೋಕಿ ಅವರಿಗೆ ಪೋಸ್ಟರ್ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಇದರೊಂದಿಗೆ ಭಜರಂಗಿ ಲೋಕಿಯ ಲುಕ್ ಕೂಡಾ ರಿವೀಲ್ ಆದಂತಾಗಿದೆ. ಹಂತ ಹಂತವಾಗಿ ಪಾತ್ರಗಳ ಬಗ್ಗೆ ಒಂದಷ್ಟು ವಿಚಾರ ಹಂಚಿಕೊಳ್ಳುತ್ತಿರುವ ಚಿತ್ರತಂಡ, ಇದೀಗ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಭಜರಂಗಿ ಲೋಕಿ ಪಾತ್ರದ ಚಹರೆಯನ್ನು ಜಾಹೀರಾಗಿಸಿದೆ.

ಇದು ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಇದರಲ್ಲಿ ಭಜರಂಗಿ ಲೋಕಿ ವಿಲನ್ ಆಗಿ ಅಬ್ಬರಿಸಿದ್ದಾರೆಂಬ ವಿಚಾರ ಈ ಹಿಂದೆಯೇ ಬಯಲಾಗಿತ್ತು. ಲೋಕಿ ಇದುವರೆಗೂ ಸಾಕಷ್ಟು ಬಗೆಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ನಾನಾ ಶೇಡುಗಳಲ್ಲಿ ವಿಲನ್ ಆಗಿ ಆರ್ಭಟಿಸಿದ್ದಾರೆ. ದಿಲ್ ದಾರ್ ನಲ್ಲಿ ಅವರ ಪಾತ್ರ ಹೇಗಿರಬಹುದೆಂಬ ಕುತೂಹಲ ಸಹಜವಾಗಿಯೇ ಮೂಡಿಕೊಂಡಿತ್ತು.

ಇಲ್ಲಿ ಅವರು ಕಾಲೇಜ್ ಬಾಯ್ ಲುಕ್ಕಿನಲ್ಲಿ, ಖಳನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆಂಬ ಮಾಹಿತಿಯನ್ನಷ್ಟೇ ನಿರ್ದೇಶಕರು ಸದ್ಯದ ಮಟ್ಟಿಗೆ ಹಂಚಿಕೊಂಡಿದ್ದಾರೆ. ಮಿಕ್ಕಿಳಿದ ಮುಖ್ಯ ವಿಚಾರಗಳು ಮುಂಬರುವ ದಿನಗಳಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

ಅಂದಹಾಗೆ, ಇದು ಅಪರೂಪದ ಪ್ರೇಮ ಕಥಾನಕವನ್ನೊಳಗೊಂಡಿರುವ ಚಿತ್ರ. ಶ್ರೇಯಸ್ ಮಂಜು ಇದುವರೆಗೂ ಕಾಣಿಸಿಕೊಳ್ಳದಿದ್ದ ಪಾತ್ರದ ಮೂಲಕ ಅಚ್ಚರಿ ಮೂಡಿಸಲು ತಯಾರಾಗಿದ್ದಾರೆ. ನೃತ್ಯವೂ ಸೇರಿದಂತೆ ನಾನಾ ಬಗೆಯಲ್ಲಿ ಅವರು ಚಕಿತಗೊಳಿಸಲಿದ್ದಾರೆಂಬ ಸೂಚನೆ ಚಿತ್ರತಂಡದ ಕಡೆಯಿಂದ ಸಿಕ್ಕಿದೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಇದೀಗ ಭಜರಂಗಿ ಲೋಕಿಯ ಹುಟ್ಟುಹಬ್ಬದ ನೆಪದಲ್ಲಿ ಅವರ ಲುಕ್ ರಿವೀಲಾಗಿದೆ. ಮುಂದಿನ ದಿನಗಳಲ್ಲಿ ಮಿಕ್ಕುಳಿದ ಮಾಹಿತಿಗಳು ಪ್ರೇಕ್ಷಕರ ಮುಂದೆ ಬರಲಿವೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ನನಗೆ ಡೈವೋರ್ಸ್‌ ಸಿಗೋದು ಪಕ್ಕಾ..' ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್‌ ಫೋಟೋಗೆ ಫ್ಯಾನ್ಸ್ ರಿಯಾಕ್ಷನ್‌
ಐಎಂಡಿಬಿ 2025 ಪಟ್ಟಿಯಲ್ಲಿ ದಾಖಲೆ: ಮೂವರು ಕನ್ನಡದ ತಾರೆಗಳಿಗೆ ಟಾಪ್‌ 10ರಲ್ಲಿ ಸ್ಥಾನ!