ಮೋದಿ ಭೀಷ್ಮ ಪಿತಾಮಹಾ ಇದ್ದಂಗೆ: ಚೌಕಿದಾರನಾಗಿರುವ ನಟನಿಂದ ರಾಹುಲ್ ಗೆ ತಪರಾಕಿ!

Published : Mar 21, 2019, 05:15 PM ISTUpdated : Mar 21, 2019, 06:23 PM IST
ಮೋದಿ ಭೀಷ್ಮ ಪಿತಾಮಹಾ ಇದ್ದಂಗೆ: ಚೌಕಿದಾರನಾಗಿರುವ ನಟನಿಂದ ರಾಹುಲ್ ಗೆ ತಪರಾಕಿ!

ಸಾರಾಂಶ

‘ಪ್ರಧಾನಿ ನರೇಂದ್ರ ಮೋದಿ ಕುರಿತು ಹಗುರ ಮಾತು ಸಲ್ಲ’| ಮಾಜಿ ನಟನಿಂದ ರಾಹುಲ್ ಗಾಂಧಿಗೆ ತಪರಾಕಿ| ಅಪಾರ್ಟಮೆಂಟ್ ವೊಂದರಲ್ಲಿ ಕಾವಲುಗಾರನಾಗಿರುವ ಸವಿ ಸಿಧು| ಪ್ರಧಾನಿ ಮೋದಿ ಅವರ #MainBhiChowkidar ಅಭಿಯಾನಕ್ಕೆ ಸವಿ ಬೆಂಬಲ| ಮೋದಿ ಭಾರತದ ರಾಜಕಾರಣದ ಭೀಷ್ಮ ಪಿತಾಮಹಾ ಎಂದ ಸವಿ ಸಿಧು|

ಮುಂಬೈ(ಮಾ.21): ಪ್ರಧಾನಿ ನರೇಂದ್ರ ಮೋದಿ ಭಾರತದ ರಾಜಕಾರಣದ ಭೀಷ್ಮ ಪಿತಾಮಹಾ ಇದ್ದ ಹಾಗೆ ಎಂದು ಚಲನಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಮುಂಬೈನ ಅಪಾರ್ಟಮೆಂಟ್ ವೊಂದರ ಕಾವಲುಗಾರ ಸವಿ ಸಿಧು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ #MainBhiChowkidar ಅಭಿಯಾನ ಲೇವಡಿ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸವಿ ಸಿಧು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾರತದ ರಾಜಕಾರಣದಲ್ಲಿ ಹಿರಿಯರಾಗಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಂತ ಯುವ ನಾಯಕರು ಅವರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಸವಿ ಸಿಧು ಹೇಳಿದ್ದಾರೆ.

ಸವಿ ಸಿಧು ಬಾಲಿವುಡ್ ಚಿತ್ರಗಳಾದ ಬ್ಲ್ಯಾಕ್ ಫ್ರೈಡೇ, ಗುಲಾಲ್, ಪಾಂಚ್, ಪಟಿಯಾಲಾ ಹೌಸ್ ಮುಂತಾದ ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಹೆಚ್ಚು ಅವಕಾಶಗಳು ದೊರೆಯದ ಕಾರಣ ಸದ್ಯ ಸವಿ ಅಪಾರ್ಟಮೆಂಟ್ ವೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಬಿಗ್‌ಬಾಸ್‌ ಮನೆಯಿಂದ ಹೊರಬಂದ ಬೆನ್ನಲ್ಲಿಯೇ ಸ್ಪರ್ಧಿ ಮೇಲೆ ಗಂಭೀರ ಆರೋಪ ಮಾಡಿದ ಡಿಸೈನರ್‌!
ದರ್ಶನ್ 'ದಿ ಡೆವಿಲ್' ನಾಯಕಿ ರಚನಾ ರೈ ಸಾಮಾನ್ಯರಲ್ಲ, ಸ್ಪೆಷಲ್ ಲೇಡಿ!