
ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ 'ರವಿಶಾಸ್ತ್ರಿ' ಚಿತ್ರ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಸ್ನೇಹಾ, 'ಒಗ್ಗರಣೆ' ಹಾಗೂ 'ಕುರುಕ್ಷೇತ್ರ' ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಈ ನಟಿಗೆ ಸೀಮಂತ ಕಾರ್ಯವೂ ಜೋರಾಗಿ ನಡೆದಿದೆ.
ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಸ್ನೇಹ ಹಳದಿ- ಕೆಂಪು ಕಾಂಬಿನೇಷನ್ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸೀಮಂತದ ಅಮೂಲ್ಯ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕೆಲವು ದಿನಗಳ ಹಿಂದೆ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸ್ನೇಹಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿಯೇ ಬಹಿರಂಗಗೊಳಿಸಿದ್ದರು.
ನಿವೇದಿತಾ-ಚಂದನ್ ಶೆಟ್ಟಿ ಮದ್ವೆ; ಈ ಜೋಡಿ ಲವ್ ಸ್ಟೋರಿ ಕೇಳಿದ್ದೀರಾ?
2009ರಿಂದ ಗೆಳೆಯ ಪ್ರಸನ್ನ ಅವರನ್ನು ಪ್ರೀತಿಸುತ್ತಿದ್ದ ಸ್ನೇಹ 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟಿದ್ದರು. 2015ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮದುವೆ ಹಾಗೂ ಮಗುವಾದ ಬಳಿಕವೂ ಸ್ನೇಹ ತೆಲಗು, ಕನ್ನಡ ಹಾಗೂ ಮಲಯಾಳಂ ಚಿತ್ರಗಳಲ್ಲಿ ಮಿಂಚಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.