ನಿಶ್ಚಿತಾರ್ಥ ಮಾಡಿಕೊಂಡ 'ಮನಸಾರೆ' ಜೋಡಿ, ಮದುವೆ ಡೇಟ್ ಕೂಡಾ ಫಿಕ್ಸ್!

Published : Nov 21, 2018, 09:44 AM ISTUpdated : Nov 21, 2018, 10:10 AM IST
ನಿಶ್ಚಿತಾರ್ಥ ಮಾಡಿಕೊಂಡ 'ಮನಸಾರೆ' ಜೋಡಿ, ಮದುವೆ ಡೇಟ್ ಕೂಡಾ ಫಿಕ್ಸ್!

ಸಾರಾಂಶ

ಸದ್ಯ ಬಾಲಿವುಡ್ ಸ್ಟಾರ್ಸ್ ದೀಪಿಕಾ ಹಾಗೂ ರಣವೀರ್ ಮದುವೆ ಸದ್ದು ಮಾಡುತ್ತಿದೆ. ಇದೀಗ ಇದರ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ 'ಮನಸಾರೆ' ಜೋಡಿಯೂ ದಾಂಪತ್ಯ ಜೀವನಕ್ಕೆ ಕಾಲಿಡಲು ಮುಂದಾಗಿದೆ.

ಸ್ಯಾಂಡಲ್‌ವುಡ್‌ನ ಮತ್ತೊಂದು ಸ್ಟಾರ್ ಜೋಡಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಮನಸಾರೆ, ಪಾರಿಜಾತ ಮೊದಲಾದ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದ ನಟ ದಿಗಂತ್ ಹಾಗೂ ಐಂದ್ರಿತಾ ರೇ ಈ ಹಿಂದೆಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇದೀಗ ಮದುವೆ ಡೇಟ್ ಕೂಡಾ ಫಿಕ್ಸ್ ಆಗಿದೆ. 

ಹೌದು ಸ್ಯಾಂಡಲ್‌ವುಡ್‌ನ ಕ್ಯೂಟ್ ಕಪಲ್ ದಿಗಂತ್ ಹಾಗೂ ಐಂದ್ರಿತಾ ಡಿಸೆಂಬರ್ 11 ಹಾಗೂ 12ರಂದು ಹಸೆಮಣೆ ಏರಲಿದ್ದಾರೆ.  ಮೂರು ತಿಂಗಳ ಹಿಂದೆಯೇ ಸದ್ದಿಲ್ಲದೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ದೂದ್ ಪೇಡಾ ಖ್ಯಾತಿಯ ದಿಗಂತ್ ಹಾಗೂ ಬೆಂಗಾಲಿ ಬೆಡಗಿ ಐಂದ್ರಿತಾ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. 

ನಿಶ್ಚಿತಾರ್ಥವನ್ನು ಸೈಲೆಂಟಾಗಿ ಮುಗಿಸಿರುವ ಸ್ಯಾಂಡಲ್‌ವುಡ್‌ನ ಈ ಲವ್‌ ಬರ್ಡ್ಸ್‌ಗಳ ಮದುವೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆಯಂತೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
ಕರ್ನಾಟಕ ನನ್ನ ಅಣ್ಣನ ಮನೆ.. 'ಅಖಂಡ 2'ನಲ್ಲಿ ಬಾಲಯ್ಯ ಡೈಲಾಗ್‌ಗೆ ಶಿಳ್ಳೆ-ಚಪ್ಪಾಳೆ ಜೈಜೈ ಘೋಷ!