
ಮುಂಬೈ : ಲೈಂಗಿಕ ದೌರ್ಜನ್ಯದ ವಿರುದ್ಧ ಮಿ ಟೂ ಎಂಬ ಅಭಿಯಾನವೊಂದು ಕಳೆದ ವರ್ಷದಿಂದ ಆರಂಭವಾಗಿ ಚಿತ್ರ ಜಗತ್ತನಲ್ಲೇ ಸಾಕಷ್ಟು ಅಲ್ಲೋಲ ಕಲ್ಲೋಲ ಉಂಟು ಮಾಡಿತ್ತು. ಈ ವೇದಿಕೆಯಲ್ಲಿ ಅನೇಕ ನಟಿಯರು ತಮಗೆ ಚಿತ್ರರಂಗದಲ್ಲಿ ಎದುರಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮನಬಿಚ್ಚಿ ಮಾತನಾಡಿದ್ದರು.
ಅನೇಕ ನಟಿಯರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. ಹಾಲಿವುಡ್ ಪ್ರಸಿದ್ಧ ನಿರ್ಮಾಪಕ ಹಾರ್ವೆ ವಿನ್ಸ್’ಸ್ಟೈನ್’ನಿಂದ ತಾವು ಕಿರುಕುಳ ಎದುರಿಸಿದ್ದಾಗಿ ಅನೇಕ ನಟಿಯರು ಹೇಳಿಕೊಂಡಿದ್ದರು.
ಇದೀಗ ವಿಶ್ವದ ಸುಂದರ ಮಹಿಳೆ ಎನಿಸಿಕೊಂಡ ಐಶ್ವರ್ಯಾ ರೈ ಈ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಯಾವುದೇ ಮಹಿಳೆಗೆ ಇಂತಹ ಅನುಭವಗಳಾದಾಗ ಅದನ್ನು ಹೆಳಿಕೊಳ್ಳಲು ಸಾಕಷ್ಟು ಮುಜುಗರ ಅನುಭವಿಸಬೇಕಾಗುತ್ತದೆ.
ಆದರೆ ತಮಗಾದ ಕೆಟ್ಟ ಅನುಭವಗಳನ್ನು ಹಂಚಿಕೊಳ್ಳಲು ಇದೊಂದು ಒಳ್ಳೆಯ ವೇದಿಕೆಯಾಗಿದೆ. ಇದರಲ್ಲಿ ಯಾವುದೇ ರೀತಿಯಾದ ನಿರ್ಬಂಧಗಳು ಇಲ್ಲ. ಜೀವನದ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಮುಕ್ತ ವೇದಿಕೆ ಎಂದು ಐಶ್ವರ್ಯ ಹೇಳಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.