
ಮುಂಬೈ : ಬಾಲಿವುಡ್ ಬ್ಯೂಟಿ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಇದುವರೆಗೂ ಕೂಡ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದ ಐಶ್ವರ್ಯಾ ಇದೀಗ ಇನ್ ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದಾರೆ.
ಯಾವುದೇ ರೀತಿಯ ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರದಿದ್ದ ಐಶ್ವರ್ಯಾ ತಮ್ಮ ಜೀವನದ ಯಾವುದೇ ಕ್ಷಣಗಳನ್ನೂ ಕೂಡ ಹಂಚಿಕೊಳ್ಳಲು ಇಷ್ಟಪಡುತ್ತಿರಲಿಲ್ಲ.
ಆದರೆ ಇದೀಗ ಮೊದಲ ಬಾರಿಗೆ ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ತೆರೆದಿದ್ದಾರೆ. ಫ್ರಾನ್ಸ್ ನ ಕೇನ್ ಚಲನಚಿತ್ರೋತ್ಸವಕ್ಕೆ ತೆರಳುವ ಮುನ್ನ ಖಾತೆಯನ್ನು Aishwarya Rai Bachchan ಎಂಬ ಹೆಸರಿನಲ್ಲಿ ತೆರೆದಿದ್ದಾರೆ.
ಅನೇಕ ದಿನಗಳಿಂದ ಐಶ್ವರ್ಯಾಗೆ ಅಭಿಮಾನಿಗಳಿಂದ ಖಾತೆ ತೆರೆಯಲು ಆಗ್ರಹ ಕೇಳಿ ಬರುತ್ತಿತ್ತು. ಇದೀಗ ಅಭಿಮಾನಿಗಳಿಗೆ ಈ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.
ಈಗಾಗಲೇ ಅತ್ಯಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಐಶ್ವರ್ಯಾರನ್ನು ಫಾಲೋ ಮಾಡಲು ಆರಂಭಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.