ನಟ ಉಪೇಂದ್ರನಿಗೆ ಜಾತಿನಿಂದನೆ ಕೇಸ್‌ನಡಿ 3 ವರ್ಷ ಜೈಲು ಶಿಕ್ಷೆ.? ಐಪಿಸಿ ಸೆಕ್ಷನ್‌ ಏನು ಹೇಳುತ್ತವೆ ಗೊತ್ತಾ?

By Sathish Kumar KH  |  First Published Aug 14, 2023, 1:26 PM IST

ವಿವಾದಾತ್ಮಕ ಹೇಳಿಕೆಗೆ ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿವೆ. ಈ ಕೇಸ್‌ ಬಗ್ಗೆ ಐಪಿಸಿ ಸೆಕ್ಷನ್‌ಗಳು ಏನು ಹೇಳುತ್ತವೆ? ಬಂಧನ ಆಗಲಿದೆಯಾ.? ಎಂಬ ಮಾಹಿತಿ ಇಲ್ಲಿದೆ ನೋಡಿ.


ಬೆಂಗಳೂರು (ಆ.14): ಸ್ಯಾಂಡಲ್‌ವುಟ್‌ ನಟ, ನಿರ್ದೇಶಕ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ವಿವಾದಾತ್ಮಕ ಹೇಳಿಕೆಗೆ ಬೆಂಗಳೂರಿನ ಎರಡು ಪೊಲೀಸ್‌ ಠಾಣೆಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾತಿನಿಂದನೆ ಪ್ರಕರಣವನ್ನು ದಾಖಲಿಸಲಾಗಿದೆ. ಈ ಪ್ರಕರಣದ ಬಗ್ಗೆ ಐಪಿಸಿ ಸೆಕ್ಷನ್‌ ಏನು ಹೇಳುತ್ತವೆ? ಬಂಧನ ಆಗಲಿದೆಯಾ.? ಶಿಕ್ಷೆ ಏನಿದೆ ಎಂಬುದರ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ ನೋಡಿ...

ಕಳೆದ ಮೂರು ದಿನಗಳ ಹಿಂದೆ ಪ್ರಜಾಕೀಯ ಪಕ್ಷದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಲೈವ್‌ ಕಾರ್ಯಕ್ರಮ ನಡೆಸಿಕೊಡುವಾಗ 'ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ' ಎಂಬ ಹೇಳಿಕೆ ನೀಡಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆಮ ವಿಡಿಯೋದಲ್ಲಿ ಜಾತಿ ನಿಂದನೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಯಿತು. ಇದಾದ ನಂತರ ಪ್ರತಿಭಟನೆಗಳನ್ನೂ ಮಾಡಲಾಗಿದೆ. ನಂತರ, ಪೊಲೀಸ್‌ ಠಾಣೆಗಳಲ್ಲಿ ಜಾತಿನಿಂದನೆ (ಅಟ್ರಾಸಿಟಿ) ದೂರು ಕೊಡಲಾಗಿತ್ತು. ಈಗ ವಿಚಾರಣೆಗೆ ಹಾಜರಾಗದೇ ಉಪೇಂದ್ರ ನಾಪತ್ತೆಯಾಗಿದ್ದಾರೆ. ಇನ್ನು ಉಪೇಂದ್ರನ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಯಾವ ಶಿಕ್ಷೆ ಆಗಲಿದೆ ಮತ್ತು ಐಪಿಸಿ ಸೆಕ್ಷನ್‌ಗಳು ಏನು ಹೇಳುತ್ತವೆ ಎಂಬುದು ಆತಂಕಕ್ಕೆ ಕಾರಣವಾಗಿದೆ.

Tap to resize

Latest Videos

ಬುದ್ಧಿವಂತ ನಟ ಉಪೇಂದ್ರ ಹೊಲೆಗೇರಿ ಹೇಳಿಕೆ: ಎಫ್‌ಐಆರ್‌ ದಾಖಲಿಸಿದ ಸಮಾಜ ಕಲ್ಯಾಣ ಇಲಾಖೆ

ಉಪೇಂದ್ರ ವಿರುದ್ದ ಐಪಿಸಿ ಸೆಕ್ಷನ್ 1980 ಅಂಡರ್ ಸೆಕ್ಷನ್ 505(1)(c) 153a, 295a ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಹಾಗಾದರೆ ಮೇಲ್ಕಂಡ ಸೆಕ್ಷನ್ ಗಳು ಏನನ್ನ ಉಲ್ಲೇಖಿಸಿದೆ ಅನ್ನೊ ಮಾಹಿತಿ ಇಲ್ಲಿದೆ.

505(1)(ಸಿ) - ಯಾವುದೇ ಇತರ ವರ್ಗ ಅಥವಾ ಸಮುದಾಯದ ವಿರುದ್ಧ ಯಾವುದೇ ಅಪರಾಧವನ್ನು ಮಾಡಲು ಯಾವುದೇ ವರ್ಗ ಅಥವಾ ವ್ಯಕ್ತಿಗಳ ಸಮುದಾಯವನ್ನು ಪ್ರಚೋದಿಸುವ ಅಥವಾ ಪ್ರಚೋದಿಸುವ ಉದ್ದೇಶವಾಗಿದೆ. (2) ವರ್ಗಗಳ ನಡುವೆ ದ್ವೇಷ ಅಥವಾ ದುಷ್ಪರಿಣಾಮವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು ನೀಡುವುದು. ದ್ವೇಷ ಸೃಷ್ಟಿಸುವ ಅಥವಾ ಉತ್ತೇಜಿಸುವ ಉದ್ದೇಶದಿಂದ ವದಂತಿ ಅಥವಾ ಆತಂಕಕಾರಿ ಸುದ್ದಿಗಳನ್ನು ಒಳಗೊಂಡಿರುವ ಯಾವುದೇ ಹೇಳಿಕೆ ಅಥವಾ ವರದಿಯನ್ನು ಯಾರು ಮಾಡುತ್ತಾರೆ, ಪ್ರಕಟಿಸುತ್ತಾರೆ ಅಥವಾ ಪ್ರಸಾರ ಮಾಡುತ್ತಾರೆ ಅಥವಾ ರಚಿಸುವ ಅಥವಾ ಪ್ರಚಾರ ಮಾಡುವುದು ಅಪರಾಧವಾಗಿದೆ. ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿ ಅಥವಾ ಸಮುದಾಯ ಅಥವಾ ಯಾವುದೇ ಇತರ ನೆಲದ ಆಧಾರದ ಮೇಲೆ, ವಿವಿಧ ಧಾರ್ಮಿಕ, ಜನಾಂಗೀಯ, ಭಾಷೆ ಅಥವಾ ಪ್ರಾದೇಶಿಕ ಗುಂಪುಗಳು ಅಥವಾ ಜಾತಿಗಳು ಅಥವಾ ಸಮುದಾಯಗಳ ನಡುವಿನ ದ್ವೇಷ ಅಥವಾ ದ್ವೇಷದ ಭಾವನೆಗಳು ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ, ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.

ಪೊಲೀಸರ ಕೈಗೆ ಸಿಗದ ಬುದ್ಧಿವಂತ ನಟ ಉಪೇಂದ್ರ: ನೋಟಿಸ್‌ ನೀಡಿದರೂ ವಿಚಾರಣೆಗೆ ಗೈರು

ಸೆಕ್ಷನ್ 295A ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳಿಗೆ ಶಿಕ್ಷೆಯನ್ನು ನೀಡುತ್ತದೆ, ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಆಕ್ರೋಶಗೊಳಿಸುವ ಉದ್ದೇಶವಾಗಿದೆ. 

ಮತ್ತೊಂದೆಡೆ 153A ಸೆಕ್ಷನ್‌, ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು ಅಪರಾಧವಾಗಿದೆ. 

click me!