
ಮುಂಬೈ (ಅ.19) ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದೆ. ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ತೀರಾ ಹತ್ತಿರದಿಂದ ಮೂವರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಇತ್ತ ಟೈಗರ್ ಶ್ರಾಫ್ ಕೈ ಹಾಗೂ ಎದೆಬಾಗಕ್ಕೆ ಸಣ್ಣಗಾಯವಾಗಿದೆ. ಇತ್ತ ಮೂವರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರಕರಣ ಕುರಿತು ಮಹತ್ವದ ಅಪ್‌ಡೇಟನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೀಡಿದ್ದಾರೆ. ಪ್ರಕರಣ ಮತ್ತೊಂದು ಆಯಾಮಕ್ಕೆ ತಿರುಗುವ ಸಾಧ್ಯತೆ ಗೋಚರಿಸುತ್ತಿದೆ.
ಘಟನೆ ಕುರಿತು ಮಾತನಾಡಿರುವ ಸಿಎಂ ದೇವೇಂದ್ರ ಫಡ್ನವಿಸ್, ಟೈಗರ್ ಶ್ರಾಫ್ ಮೇಲಿನ ದಾಳಿಯನ್ನು ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ದಾಳಿ ಹಿಂದೆ ಭಾರತದ ಹೊರಗಿನವರ ಕೈವಾಡವಿದೆ ಎಂದು ದೇವೇಂದ್ರ ಫಡ್ನವಿಸ್ ಅನುಮಾನ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳು ಭಾರತದ ಹೊರಗಿನಿಂದ ಕಾರ್ಯನಿರ್ವಹಿಸುತ್ತಿರುವ ಸಾಧ್ಯತೆ ಇದೆ. ಈ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸರ ತಂಡಗಳು ಈ ಕುರಿತು ತನಿಖೆ ತೀವ್ರಗೊಳಿಸಿದೆ ಎಂದು ಫಡ್ನವಿಸ್ ಹೇಳಿದ್ದಾರೆ.
ದಾಳಿಗೆ ಸಂಚು ಮಾಡಿದವರು, ದಾಳಿ ಷಡ್ಯಂತ್ರ ರೂಪಿಸಿದವರು, ದಾಳಿಕೋರರು ಮಹಾರಾಷ್ಟ್ರದೊಳಗೆ ಕಾರ್ಯನಿರ್ವಹಿಸುತ್ತಿರುವವರಲ್ಲ. ರಾಜ್ಯದೊಳಗಿನ ಅನುಮಾನಸ್ಪದ ವ್ಯಕ್ತಿಗಳ ಬಂಧನ ಆಗಿದೆ . ಶಾರ್ಪ್ ಶೂಟರ್ ಆರೋಪಿಗಳನ್ನು ಕೋಟಾದಲ್ಲಿ ಬಂಧಿಸಲಾಗಿದೆ. ಗುಜರಾತ್ ಹಾಗೂ ರಾಜಸ್ಥಾನ ಪೊಲೀಸರಿಗೆ ಆರೋಪಿಗಳ ಚಲನೆ ಕುರಿತು ಮಾಹಿತಿ ನೀಡಲಾಗಿತ್ತು. ತಪ್ಪಿತಸ್ಥರು ಯಾರೇ ಇರಲಿ ಬಿಡವುದಿಲ್ಲ ಎಂದು ಫಡ್ನವಿಸ್ ಹೇಳಿದ್ದಾರೆ.
ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲಿಸಲು ಪೊಲೀಲ್ ಇಲಾಖೆ ಸಮರ್ಥವಾಗಿದೆ ಎಂದು ಫಡ್ನವಿಸ್ ಹೇಳಿದ್ದಾರೆ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.