ಬಿಗ್‌ ಬಾಸ್ ಬೆಡಗಿಗೆ ಥೈರಾಯ್ಡ್ ಕ್ಯಾನ್ಸರ್: ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದ ಬಗ್ಗೆ ನಟಿ ಹೇಳಿದ್ದೇನು?

Published : Nov 13, 2026, 07:22 PM IST
Monal Gajjar

ಸಾರಾಂಶ

ಬಿಗ್‌ ಬಾಸ್ ಖ್ಯಾತಿಯ ನಟಿ ಮೋನಾಲ್ ಗಜ್ಜರ್ ಅವರಿಗೆ ಪಾಪಿಲ್ಲರಿ ಥೈರಾಯ್ಡ್ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಇತ್ತೀಚೆಗೆ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವ ಅವರು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಬಣ್ಣದ ಲೋಕದಲ್ಲಿ ಮಿಂಚುವ ಕಲಾವಿದರ ಬದುಕಿನಲ್ಲೂ ಅನಿರೀಕ್ಷಿತ ಸವಾಲುಗಳು ಎದುರಾಗುತ್ತವೆ. ತೆರೆಮೇಲೆ ನಗುತ್ತಾ ಪ್ರೇಕ್ಷಕರನ್ನು ರಂಜಿಸುವ ನಟ-ನಟಿಯರು ವೈಯಕ್ತಿಕ ಜೀವನದಲ್ಲಿ ಎಂತಹ ಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂಬುದು ಬಹುತೇಕ ಬಾರಿ ಯಾರಿಗೂ ತಿಳಿಯುವುದಿಲ್ಲ. ಇದೀಗ ಬಿಗ್‌ ಬಾಸ್ ಖ್ಯಾತಿಯ ನಟಿ ಮೋನಾಲ್ ಗಜ್ಜರ್ ತಮ್ಮ ಆರೋಗ್ಯದ ವಿಚಾರವನ್ನು ಬಹಿರಂಗಪಡಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತಮಗೆ ಥೈರಾಯ್ಡ್ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದಾಗಿ ಅವರು ತಿಳಿಸಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ನಾಯಕಿಯಾಗಿ ಗುರುತಿಸಿಕೊಂಡಿರುವ ಮೋನಾಲ್ ಗಜ್ಜರ್, ತಮ್ಮ ಅನಾರೋಗ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆ ವೇಳೆ ಪಾಪಿಲ್ಲರಿ ಥೈರಾಯ್ಡ್ ಕ್ಯಾನ್ಸರ್ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಸಮಾಧಾನಕರ ಸಂಗತಿಯೆಂದರೆ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

‘ಆರೋಗ್ಯವನ್ನು ನಿರ್ಲಕ್ಷಿಸಬೇಡಿ’ ಎಂದ ಮೋನಾಲ್

ತಮ್ಮ ಆರೋಗ್ಯದ ಕುರಿತ ವಿಚಾರ ಹಂಚಿಕೊಂಡಿರುವ ಮೋನಾಲ್, ಅಭಿಮಾನಿಗಳಿಗೂ ಆರೋಗ್ಯದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ವೃತ್ತಿಜೀವನದ ಒತ್ತಡ, ವೈಯಕ್ತಿಕ ಬದುಕಿನ ಜಂಜಾಟಗಳ ನಡುವೆ ಆರೋಗ್ಯವನ್ನು ಕಡೆಗಣಿಸಬಾರದು. ದೇಹದಲ್ಲಿ ಯಾವುದೇ ಅಸಹಜ ಲಕ್ಷಣಗಳು ಕಂಡುಬಂದರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂಬ ಸಂದೇಶವನ್ನು ನೀಡಿದ್ದಾರೆ.

ಇದರ ಜೊತೆಗೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್‌ಪಿವಿ (HPV) ಲಸಿಕೆಯ ಮಹತ್ವವನ್ನೂ ನೆನಪಿಸಿದ್ದಾರೆ. ತಮ್ಮ ಆರೋಗ್ಯದ ಅನುಭವದ ಮೂಲಕ ಇತರರೂ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶದಿಂದ ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

‘ಸೂಡಿಗಾಡು’ ಮೂಲಕ ತೆಲುಗು ಪ್ರೇಕ್ಷಕರಿಗೆ ಪರಿಚಯ

ಮೋನಾಲ್ ಗಜ್ಜರ್ ತೆಲುಗು ಪ್ರೇಕ್ಷಕರಿಗೆ ಚಿರಪರಿಚಿತ ಮುಖ. ಅಲ್ಲರಿ ನರೇಶ್ ಅಭಿನಯದ ‘ಸೂಡಿಗಾಡು’ ಹಾಗೂ ‘ಬ್ರದರ್ ಆಫ್ ಬೊಮ್ಮಾಳಿ’ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿ ಗಮನ ಸೆಳೆದಿದ್ದರು. ಬಳಿಕ ಹಲವು ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ತಮ್ಮದೇ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡರು. ಬೆಳ್ಳಂಕೊಂಡ ಶ್ರೀನಿವಾಸ್ ನಟನೆಯ ‘ಅಲ್ಲುಡು ಅದೂರ್ಸ್’ ಸಿನಿಮಾದ ವಿಶೇಷ ಹಾಡಿನಲ್ಲೂ ಕಾಣಿಸಿಕೊಂಡಿದ್ದರು.

ಇನ್ನು ತೆಲುಗಿನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ ಬಾಸ್ ಸೀಸನ್ 4’ರಲ್ಲಿ ಭಾಗವಹಿಸುವ ಮೂಲಕ ಕಿರುತೆರೆ ಪ್ರೇಕ್ಷಕರಿಗೂ ಮತ್ತಷ್ಟು ಹತ್ತಿರವಾಗಿದ್ದರು. ಬಿಗ್‌ ಬಾಸ್ ಮನೆಯಲ್ಲಿನ ತಮ್ಮ ಆಟ ಮತ್ತು ವ್ಯಕ್ತಿತ್ವದ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸವಾಲಿನ ನಡುವೆಯೂ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮುಗಿಸಿ ಚೇತರಿಸಿಕೊಳ್ಳುತ್ತಿರುವ ಮೋನಾಲ್ ಗಜ್ಜರ್ ಅವರ ಸುದ್ದಿ ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಅವರು ಆದಷ್ಟು ಬೇಗ ಸಂಪೂರ್ಣವಾಗಿ ಗುಣಮುಖರಾಗಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಲಿ ಎಂದು ಅಭಿಮಾನಿಗಳು ಹಾಗೂ ನೆಟ್ಟಿಗರು ಹಾರೈಸುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆಟೋಗಳ ಮೇಲೂ ವಸಂತಾ ಫೋಟೋ, ಮೊಬೈಲ್‌ಗಳಲ್ಲಿ ‘ಪ್ರೇಮದ ಊರಲಿ’ ಹಾಡು: ರಮಿಕಾ ಫುಲ್ ಖುಷ್
ಆಮೀರ್​ ಖಾನ್​ ದಾಖಲೆ ಮುರೀತಾರಾ ಯಶ್​: 2 ಸಾವಿರ ಕೋಟಿ ಕಲೆಕ್ಷನ್​ ಮಾಡಿದ ಆ ಸಿನಿಮಾ ಯಾವುದು