
ಮುಂಬೈ[ಜು.04]: ಜೂಜಾಟದಲ್ಲಿ ಭಾಗಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮೈನೇ ಪ್ಯಾರ್ ಕಿಯಾ’ ಸಿನಿಮಾ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪತಿ, ನಟ ಹಾಗೂ ನಿರ್ಮಾಪಕ ಹಿಮಾಲಯ ದಾಸನಿ ಅವರನ್ನು ಮಹಾರಾಷ್ಟ್ರದ ಪೊಲೀಸರು ಬಂಧಿಸಿದ್ದಾರೆ.
ಜೂಜಾಟದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ನಿರ್ಮಾಪಕ ದಾಸನಿ ಅವರ ಮನೆಗೆ ತೆರಳಿ ಅವರನ್ನು ವಶಕ್ಕೆ ಪಡೆದ ಪೊಲೀಸರು ಬುಧವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ದಾಸನಿ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಅಂಬೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ತನಿಖೆ ವೇಳೆ ಜೂಜಾಟದ ದಂಧೆ ಪತ್ತೆಯಾಗಿದ್ದು ಅದರಲ್ಲಿ ಹಿಮಾಲಯ ದಾಸನಿ ಪಾತ್ರ ಕಂಡು ಬಂದಿತ್ತು. ಈ ಕುರಿತು ಪ್ರಕರಣ ದಾಖಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.