
ಬೆಂಗಳೂರು (ಡಿ. 18): ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗೆ ಸಿನಿಮಾಕ್ಕಿಂತ ಹೆಚ್ಚಾಗಿ ಸಾಮಾಜಿಕ ಕಾರ್ಯಗಳಿಂದಲೇ ಹೆಚ್ಚು ಹೆಸರು ಮಾಡುತ್ತಿದ್ದಾರೆ. ಬೆಟ್ಟ, ಗುಡ್ಡ, ಪ್ರಾಣಿಗಳೆಂದು ಕ್ಯಾಮೆರಾ ಹಿಡಿದು ಕಾಡುಮೇಡು ಸುತ್ತುತ್ತಿರುತ್ತಾರೆ. ರಾಜ್ಯ ಅರಣ್ಯ ಇಲಾಖೆಯ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದ ದರ್ಶನ್
ಪ್ರಾಣಿಗಳೆಂದರೆ ಇವರಿಗೆ ಅಪಾರ ಪ್ರೀತಿ. ಇತ್ತೀಚಿಗೆ ಮೈಸೂರು ಮೃಗಾಲಯದಿಂದ ಹುಲಿ, ಆನೆಯನ್ನು ದತ್ತು ಪಡೆದಿದ್ದಾರೆ. ಜೊತೆಗೆ ಸ್ನೇಹಿತರಿಗೂ ತೆಗೆದುಕೊಳ್ಳುವಂತೆ ಪ್ರೇರೇಪಿಸಿದ್ದಾರೆ. ಇವರ ಪರಿಸರ ಪ್ರೀತಿ ಇಷ್ಟಕ್ಕೇ ಸೀಮಿತಾಗಿಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕಾಡನ್ನೇ ದತ್ತು ಪಡೆದಿದ್ದಾರೆ. ಮಲೆ ಮಹದೇಶ್ವರ ಬೆಟ್ಟವನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಮನಸ್ಸು ಮಾಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ಈಗೀಗ ಹೆಚ್ಚಿನ ಸಮಯವನ್ನು ಕಾಡು, ಬೆಟ್ಟಗಳಲ್ಲೇ ಕಳೆಯುತ್ತಿದ್ದಾರೆ. ಅರಣ್ಯ ಇಲಾಖೆಯ ರಾಯಭಾರಿಯಾಗಿ ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತಿದ್ದಾರೆ. ಹಾಗಂತ ಶೂಟಿಂಗ್ ಗೂ ತಪ್ಪಿಸಿಕೊಳ್ಳುತ್ತಿಲ್ಲ. ದರ್ಶನ್ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.