Devil Film Shoot: ದರ್ಶನ್‌ಗೆ ಥಾಯ್ಲೆಂಡ್ ಪ್ರಯಾಣಕ್ಕೆ ನ್ಯಾಯಾಲಯದಿಂದ ಅನುಮತಿ!

Kannadaprabha News, Ravi Janekal |   | Kannada Prabha
Published : Jul 09, 2025, 10:37 AM ISTUpdated : Jul 09, 2025, 10:45 AM IST
court allows actor darshan accused renukaswamy murder case travel thailand devil film shoot

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ ಅವರಿಗೆ ‘ಡೆವಿಲ್‌’ ಚಿತ್ರದ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್‌ಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. 

‘ಡೆವಿಲ್‌’ ಚಿತ್ರದ ಚಿತ್ರೀಕರಣಕ್ಕಾಗಿ ಜು.11ರಿಂದ 30ರವರೆಗೆ ಥಾಯ್ಲೆಂಡ್‌ಗೆ ಹೋಗಲು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ಗೆ ಅನುಮತಿ ನೀಡಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.

ಥಾಯ್ಲೆಂಡ್‌ಗೆ ತೆರಲು ಅನುಮತಿ ನೀಡುವಂತೆ ಕೋರಿ ದರ್ಶನ್‌ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಈ ಆದೇಶ ಮಾಡಿದೆ.

ಡೆವಿಲ್‌ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್‌ ಜು.11ರಿಂದ 30ರವರೆಗೆ ಥಾಯ್ಲೆಂಡ್‌ಗೆ ಹೋಗಬಹುದು. ವಿದೇಶದಿಂದ ಭಾರತಕ್ಕೆ ಹಿಂದಿರುಗಿದ ನಂತರ, ಯಾವ ದೇಶಕ್ಕೆ ಯಾವಾಗ ಹೋಗಲಾಯಿತು? ಯಾವಾಗ ಭಾರತಕ್ಕೆ ವಾಪಸ್‌ ಬರಲಾಯಿತು? ಎಷ್ಟು ದಿನ ವಿದೇಶದಲ್ಲಿ ಇರಲಾಯಿತು? ಅಲ್ಲಿ ನಡೆಸಲಾದ ಕಾರ್ಯ ಚಟುವಟಿಕೆಗಳೇನು? ಎಂಬ ಬಗ್ಗೆ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಬೇಕು ಎಂದು ನ್ಯಾಯಾಲಯದ ಇದೇ ವೇಳೆ ಷರತ್ತು ವಿಧಿಸಿದೆ.

ಹಿನ್ನೆಲೆ: ಜುಲೈ 1ರಿಂದ‌ 25ರ ನಡುವೆ ದುಬೈಗೆ ತೆರಳಿ ಡೆವಿಲ್‌ ಚಿತ್ರದ ಚಿತ್ರೀಕರಣ ನಡೆಸಲು ನಟ ದರ್ಶನ್‌ಗೆ ನ್ಯಾಯಾಲಯ ಈ ಹಿಂದೆ ಅನುಮತಿ ನೀಡಿತ್ತು. ಇಸ್ರೇಲ್‌ ಯುದ್ಧ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ದುಬೈಗೆ ಪ್ರಯಾಣಿಸುವುದು ಸೂಕ್ತವಲ್ಲ ಎಂದು ಚಿತ್ರ ತಂಡ ತೀರ್ಮಾನಿಸಿತ್ತು. ನಂತರ ಥಾಯ್‌ಲ್ಯಾಂಡ್‌ ನಲ್ಲಿ ಚಿತ್ರೀಕರಣ ನಡೆಸಲು ನಿರ್ಧರಿಸಲಾಗಿತ್ತು. ಹಾಗಾಗಿ, ಜೂ.11ರಿಂದ 30ರವರೆಗೆ ಥಾಯ್‌ ಲ್ಯಾಂಡ್‌ಗೆ ದರ್ಶನ್‌ಗೆ ತೆರಲು ಅನುಮತಿ ನೀಡುವಂತೆ ಕೋರಿ ಸೋಮವಾರ ದರ್ಶನ್‌ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ದಳಪತಿ ವಿಜಯ್ 'ಜನ ನಾಯಗನ್' ಚಿತ್ರದ ಕಥೆ ಇದೇನಾ? ಲೀಕ್ ಆದ ಸ್ಟೋರಿ.. ಶಾಕ್ ಆಯ್ತು ಚಿತ್ರತಂಡ!
ನಾನು ಅವಳಲ್ಲ.. ಕಾಳ್ಗಿಚ್ಚಿನಂತೆ ಹರಡಿದ ಎಐ ಫೋಟೋ: ರಶ್ಮಿಕಾ, ಶ್ರೀಲೀಲಾ ಬಳಿಕ ಸಿಟ್ಟಾದ ನಿವೇತಾ ಥಾಮಸ್